ADVERTISEMENT

ಕಮಲನಗರ: ಕಾಮಗಾರಿ ವಿಳಂಬಕ್ಕೆ ಶಾಸಕ ಪ್ರಭು ಚವಾಣ್ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 5:30 IST
Last Updated 17 ಫೆಬ್ರುವರಿ 2026, 5:30 IST
ಕಮಲನಗರ ತಾಲ್ಲೂಕಿನ ಠಾಣಾಕುಶನೂರ ಗ್ರಾಮದಲ್ಲಿ ನಡೆಯುತ್ತಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು ಶಾಸಕ ಪ್ರಭು ಬಿ. ಚವಾಣ್ ಪರಿಶೀಲಿಸಿದರು
ಕಮಲನಗರ ತಾಲ್ಲೂಕಿನ ಠಾಣಾಕುಶನೂರ ಗ್ರಾಮದಲ್ಲಿ ನಡೆಯುತ್ತಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು ಶಾಸಕ ಪ್ರಭು ಬಿ. ಚವಾಣ್ ಪರಿಶೀಲಿಸಿದರು   

ಕಮಲನಗರ: ತಾಲ್ಲೂಕಿನ ಠಾಣಾಕುಶನೂರ ಗ್ರಾಮದಲ್ಲಿ ನಡೆಯುತ್ತಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು ಶಾಸಕ ಪ್ರಭು ಬಿ. ಚವಾಣ್ ಅವರು ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಕಾಮಗಾರಿಯ ಪ್ರಗತಿ ಕುರಿತು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಂದ ಮಾಹಿತಿ ಪಡೆದ ಅವರು, ಶಂಕುಸ್ಥಾಪನೆ ನೆರವೇರಿಸಿ ಮೂರು ವರ್ಷ ಕಳೆದರೂ ಯೋಜನೆ ಇನ್ನೂ ಪೂರ್ಣಗೊಂಡಿಲ್ಲವೆಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜನರಿಗೆ ಮೂಲಭೂತ ಸೌಲಭ್ಯ ಒದಗಿಸುವ ಕೆಲಸಗಳಲ್ಲಿ ಯಾವುದೇ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ. ತಕ್ಷಣವೇ ಕಾಮಗಾರಿಗೆ ವೇಗ ನೀಡಿ, ಶೀಘ್ರ ಪೂರ್ಣಗೊಳಿಸಬೇಕು. ಇಲ್ಲವಾದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದರು.

ADVERTISEMENT

ಇಲಾಖೆಯ ಅಧಿಕಾರಿಗಳು ಕೂಡ ಆಗಾಗ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಮೇಲೆ ನಿಗಾ ವಹಿಸಬೇಕು. ಶೀಘ್ರದಲ್ಲೇ ಯೋಜನೆ ಪೂರ್ಣಗೊಂಡು ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಕಲ್ಪಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಾರುತಿ ರಾಠೋಡ, ಎಇ ಸುರೇಶ ಮೋರೆ, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಗುಂಡಪ್ಪ ನಿಡೋದೆ, ಸುಭಾಷ ಲಕ್ಷ್ಮೀನಗರ, ಅರವಿಂದ, ಬಾಲಾಜಿ ವಾಗಮಾರೆ ಹಾಗೂ ಇನ್ನಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.