ADVERTISEMENT

ಜನವಾಡ: ಗ್ರಾಮಗಳಿಗೆ ಶಾಸಕ ರಹೀಂ ಖಾನ್ ಭೇಟಿ

​ಪ್ರಜಾವಾಣಿ ವಾರ್ತೆ
Published 13 ಜೂನ್ 2021, 15:54 IST
Last Updated 13 ಜೂನ್ 2021, 15:54 IST
ಬೀದರ್ ತಾಲ್ಲೂಕಿನ ಚಿಮಕೋಡದಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಮನೆ ವೀಕ್ಷಿಸಿದ ಶಾಸಕ ರಹೀಂ ಖಾನ್
ಬೀದರ್ ತಾಲ್ಲೂಕಿನ ಚಿಮಕೋಡದಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಮನೆ ವೀಕ್ಷಿಸಿದ ಶಾಸಕ ರಹೀಂ ಖಾನ್   

ಜನವಾಡ: ಶಾಸಕ ರಹೀಂ ಖಾನ್ ಬೀದರ್ ತಾಲ್ಲೂಕಿನ ಚಿಲ್ಲರ್ಗಿ, ಹಮಿಲಾಪುರ, ಚಿಮಕೋಡ ಮತ್ತು ಗಾದಗಿ ಗ್ರಾಮಗಳಿಗೆ ಶನಿವಾರ ಭೇಟಿ ನೀಡಿದರು.

ಚಿಮಕೋಡದಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳ ವೀಕ್ಷಣೆ ಮಾಡಿದರು. ಸಂತ್ರಸ್ತರಿಗೆ ಪರಿಹಾರ
ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಗಾಳಿ ಮಳೆಯಿಂದಾಗಿ ವಿದ್ಯುತ್ ತಂತಿಗಳು ಸಡಿಲಗೊಂಡಿವೆ ಎಂದು ಗ್ರಾಮಸ್ಥರು ತಿಳಿಸಿದ ಕೂಡಲೇ ಶಾಸಕರು ಜೆಸ್ಕಾಂನ ಅಧಿಕಾರಿಗಳಿಗೆ ಕರೆ ಮಾಡಿ ಅದನ್ನು ಸರಿಪಡಿಸಬೇಕು ಎಂದು ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ನಿರ್ದೇಶನ ನೀಡಿದರು.

ADVERTISEMENT

ಹಮಿಲಾಪುರದಲ್ಲಿ ಗ್ರಾಮಸ್ಥರ ಅಹವಾಲು ಆಲಿಸಿದರು. ಕುಡಿಯುವ ನೀರಿಗೆ ತೊಂದರೆಯಾಗಿದ್ದು ಹೊಸ ಬೋರ್‌ವೆಲ್ ಕೊರೆಯಿಸಬೇಕು. ಗ್ರಾಮದಲ್ಲಿ ಹೈಮಾಸ್ಟ್ ವಿದ್ಯುತ್ ದೀಪ ಅಳವಡಿಸಬೇಕು ಎಂದು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.

ಚಿಲ್ಲರ್ಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು. ಕೋವಿಡ್ ಮಾರ್ಗಸೂಚಿ ಅನುಸಾರ ಆಯಾ ಗ್ರಾಮಗಳಲ್ಲಿನ ಅರ್ಹ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲು ಕ್ರಮ ವಹಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಯರನಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಬಿತ್ತನೆ ಬೀಜ ವಿತರಣೆಯ ಬಗ್ಗೆ ಮಾಹಿತಿ ಪಡೆದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರೊಂದಿಗೆ ಮಾತನಾಡಿ ಗಾದಗಿ ಮತ್ತು ಸುತ್ತಲಿನ ಗ್ರಾಮಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹತ್ತಿ ಬೆಳೆಯುವ ರೈತರ ಅನುಕೂಲಕ್ಕಾಗಿ ಗಾದಗಿ ಗ್ರಾಮದಲ್ಲಿ ಹತ್ತಿ ಖರೀದಿ ಕೇಂದ್ರವನ್ನು ಸ್ಥಾಪಿಸಲು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ಬೀದರ್ ತಹಶೀಲ್ದಾರ್ ಗಂಗಾದೇವಿ ಸಿ.ಎಚ್., ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶರತಕುಮಾರ ಹಾಗೂ ಪಿಡಿಒಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.