ADVERTISEMENT

ಲೈಂಗಿಕ ದೌರ್ಜನ್ಯ ಆರೋಪ: ಶಾಸಕ ಚವಾಣ್‌ ಪುತ್ರನ ಜಾಮೀನು ಅರ್ಜಿ ತಿರಸ್ಕಾರ

​ಪ್ರಜಾವಾಣಿ ವಾರ್ತೆ
Published 31 ಜುಲೈ 2025, 18:48 IST
Last Updated 31 ಜುಲೈ 2025, 18:48 IST
ಪ್ರಭು ಚವಾಣ್‌
ಪ್ರಭು ಚವಾಣ್‌   

ಬೀದರ್‌: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ, ಔರಾದ್‌ ಕ್ಷೇತ್ರದ ಶಾಸಕ ಪ್ರಭು ಚವಾಣ್‌ ಅವರ ಮಗ ಪ್ರತೀಕ್‌ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಯನ್ನು ಸ್ಥಳೀಯ ಕೋರ್ಟ್ ತಿರಸ್ಕರಿಸಿದೆ.

‘ಬೀದರ್‌ನ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ಕೋರ್ಟ್‌ನ ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಅವರು ಜು. 29ರಂದು ವಾದ–ಪ್ರತಿವಾದ ಆಲಿಸಿ ಆದೇಶ ಕಾಯ್ದಿ ರಿಸಿದ್ದರು. ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿ ಗುರುವಾರ ಆದೇಶಿಸಿದರು’ ಎಂದು ಸಂತ್ರಸ್ತೆ ಪರ ವಕೀಲ, ಸರ್ಕಾರಿ ಅಭಿಯೋಜಕ ಕೇಶವ ಶ್ರೀಮಾಳೆ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

‘ಮದುವೆ ಆಗುವುದಾಗಿ ನಂಬಿಸಿ ಪ್ರತೀಕ್‌ ಲೈಂಗಿಕ ದೌರ್ಜನ್ಯ ಎಸಗಿ ವಂಚಿಸಿದ್ದಾರೆ’ ಎಂದು ಸಂತ್ರಸ್ತೆ ಮಹಿಳಾ ಆಯೋಗ ಹಾಗೂ ಬೀದರ್‌ ಮಹಿಳಾ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದರು.

ADVERTISEMENT

ಪ್ರತೀಕ್‌ ಚವಾಣ್‌ ಸದ್ಯ ತಲೆಮರೆಸಿ ಕೊಂಡಿದ್ದು, ಪೊಲೀಸರು ಅವರ ಪತ್ತೆಗೆ ಎರಡು ತಂಡ ರಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.