ADVERTISEMENT

ಕೋವಿಶೀಲ್ಡ್ ಲಸಿಕೆ ಪಡೆದ ಶಾಸಕರು

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2021, 3:21 IST
Last Updated 4 ಮಾರ್ಚ್ 2021, 3:21 IST
ಬೀದರ್‌ನಲ್ಲಿ ಬುಧವಾರ ಶಾಸಕ ಬಂಡೆಪ್ಪ ಕಾಶೆಂಪೂರ್, ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ ಹಾಗೂ ರಘುನಾಥರಾವ್ ಮಲ್ಕಾಪುರೆ ಅವರು ಕೋವಿಶೀಲ್ಡ್ ಲಸಿಕೆ ಪಡೆದರು
ಬೀದರ್‌ನಲ್ಲಿ ಬುಧವಾರ ಶಾಸಕ ಬಂಡೆಪ್ಪ ಕಾಶೆಂಪೂರ್, ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ ಹಾಗೂ ರಘುನಾಥರಾವ್ ಮಲ್ಕಾಪುರೆ ಅವರು ಕೋವಿಶೀಲ್ಡ್ ಲಸಿಕೆ ಪಡೆದರು   

ಬೀದರ್: ಶಾಸಕ ಬಂಡೆಪ್ಪ ಕಾಶೆಂಪೂರ್, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪುರೆ ಹಾಗೂ ಅರವಿಂದಕುಮಾರ ಅರಳಿ ಅವರು ನಗರದಲ್ಲಿ ಬುಧವಾರ ಕೋವಿಡ್ ವಿರುದ್ಧದ ಕೋವಿಶೀಲ್ಡ್ ಲಸಿಕೆ ಪಡೆದರು.

100 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಅವರಿಗೆ ಲಸಿಕೆ ನೀಡಿದರು.

ಕೋವಿಶೀಲ್ಡ್ ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮ ಕಂಡು ಬಂದಿಲ್ಲ ಎಂದು ಶಾಸಕತ್ರಯರು ತಿಳಿಸಿದರು. ಲಸಿಕೆ ಸುರಕ್ಷಿತವಾಗಿದೆ. ಯಾವುದೇ ಅಡ್ಡ ಪರಿಣಾಮಗಳು ಉಂಟಾಗುವುದಿಲ್ಲ. ಎಲ್ಲರೂ ಲಸಿಕೆ ಪಡೆಯಬೇಕು ಎಂದು ಮನವಿ ಮಾಡಿದರು.

ADVERTISEMENT

ಆಸ್ಪತ್ರೆಯ ಆಡಳಿತಾಧಿಕಾರಿ ಮೊಹಮ್ಮದ್ ಸೋಹೆಲ್, ಡಾ. ರತಿಕಾಂತ ಸ್ವಾಮಿ, ಡಾ. ಸರೋಜಾ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.