ADVERTISEMENT

ಬಿ.ವಿ.ಶಿರೂರ್‌ಗೆ ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಸಂಶೋಧನಾ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2023, 12:35 IST
Last Updated 9 ನವೆಂಬರ್ 2023, 12:35 IST
   

ಬಸವಕಲ್ಯಾಣ (ಬೀದರ್‌ ಜಿಲ್ಲೆ): ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿಯಿಂದ ನೀಡಲಾಗುವ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಸಾಹಿತ್ಯ ಸಂಶೋಧನಾ ಪ್ರಶಸ್ತಿಗೆ ಸಂಶೋಧಕ ಬಿ.ವಿ.ಶಿರೂರ್ ಭಾಜನರಾಗಿದ್ದಾರೆ.

ಪ್ರಶಸ್ತಿಯು ₹50 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ವಿಶ್ವಸ್ಥ ಮಂಡಳಿ ಅಧ್ಯಕ್ಷ ಭಾಲ್ಕಿ ಬಸವಲಿಂಗ ಪಟ್ಟದ್ದೇವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೊಪ್ಪಳದ ಬಿ.ವಿ.ಶಿರೂರ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇವರು 30 ಮೌಲಿಕ ಗ್ರಂಥಗಳನ್ನು ಬರೆದಿದ್ದಾರೆ. ನವೆಂಬರ್ 25ರಂದು ಬಸವಕಲ್ಯಾಣದಲ್ಲಿ ಹಮ್ಮಿಕೊಂಡಿರುವ 44 ನೇ ಅನುಭವ ಮಂಟಪ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಮಂಡಳಿ ಕಾರ್ಯದರ್ಶಿ ಡಾ.ಎಸ್.ಬಿ.ದುರ್ಗೆ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.