ADVERTISEMENT

ಮೋಳಕೇರಾ ಸ್ಫೋಟ: ಮುಂದುವರಿದ ತನಿಖೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2026, 5:01 IST
Last Updated 3 ಫೆಬ್ರುವರಿ 2026, 5:01 IST
ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ತನಿಖೆ ಮುಂದುವರಿಸಿರುವ ಪೊಲೀಸರು.
ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ತನಿಖೆ ಮುಂದುವರಿಸಿರುವ ಪೊಲೀಸರು.   

ಹುಮನಾಬಾದ್: ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದ್ದ ಸ್ಫೋಟದ ತನಿಖೆಯನ್ನು ಪೊಲೀಸರು ಸೋಮವಾರವೂ ಮುಂದುವರಿಸಿದ್ದಾರೆ. ಕಲಬುರಗಿ ಪೊಲೀಸ್ ಆಯುಕ್ತ ಶಾಂತನು ಸಿನ್ಹಾ ಅವರು ಸೋಮವಾರ ಸ್ಪೋಟದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.‌‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟೆ, ಡಿವೈಎಸ್‌ಪಿ ಮಡೋಳ್ಳಪ್ಪ ಅವರಿಂದ ಮಾಹಿತಿ ಪಡೆದರು.

ಪ್ರಕರಣ ದಾಖಲು: ಮೊಳಕೇರಾ ಗ್ರಾಮದಲ್ಲಿ ಶನಿವಾರ ಸಂಭವಿಸಿದ ಸ್ಫೋಟದ ಘಟನೆಗೆ ಸಂಬಂಧ ಇಬ್ಬರ ವಿರುದ್ಧ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾನವ ಜೀವಕ್ಕೆ ಅಪಾಯಕಾರಿ ರಾಸಾಯನಿಕ ತ್ಯಾಜ್ಯ, ಸುರಕ್ಷತೆ ವಹಿಸದೆ ಸಂಗ್ರಹಿಸಿಟ್ಟ ಆರೋಪದ ಮೇರೆಗೆ ಚಾಂದಪಾಷಾ ಹಾಗೂ ಜಬ್ಬಾರಮಿಯ್ಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಚಾಂದಪಾಷಾನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜನವರಿ 31ರಂದು ಈ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ನಾಲ್ಕು ಮಕ್ಕಳು ಸೇರಿದಂತೆ 6 ಜನರು ಗಂಭೀರ ಗಾಯಗೊಂಡಿದ್ದರು. ಸ್ಫೋಟದ ಕಾರಣ ಇನ್ನೂ ಗೊತ್ತಾಗಿಲ್ಲ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.