ಚಿಟಗುಪ್ಪ: ‘ಹಲವು ಗಂಭೀರ ಸ್ವರೂಪದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಸರ್ಕಾರದ ನೆರವಿನ ಅವಶ್ಯಕತೆಯಿದ್ದು, ಸೂಕ್ತ ಚಿಕಿತ್ಸೆ ಕೊಡಿಸುವ ಹಾಗೂ ಆರ್ಥಿಕ ನೆರವು ನೀಡುವ ಕಾರ್ಯ ಮಾಡಲಾಗುತ್ತಿದೆ’ ಎಂದು ಸಂಸದ ಸಾಗರ ಖಂಡ್ರೆ ಹೇಳಿದರು.
ತಾಲ್ಲೂಕಿನ ನಿರ್ಣಾ ಗ್ರಾಮದ ಕಿಡ್ನಿ ಕಾಯಿಲೆಯಿಂದ ಬಳಲುತ್ತಿರುವ ಮಂಜುನಾಥ ಉಪಾರ್ ಎಂಬ ಯುವಕನ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಬಳಿಕ ಮಾತನಾಡಿದರು.
‘ಕೇಂದ್ರ ಸರ್ಕಾರದಲ್ಲಿ ಲಭ್ಯ ಇರುವ ಯೋಜನೆಗಳ ಸದ್ಬಳಕೆ ಮಾಡಿಕೊಂಡು ಯುವಕನಿಗೆ ಸಿಗಬಹುದಾದ ಪ್ರಯೋಜನಗಳು ಲಭಿಸುವಂತೆ ಮಾಡಲಾಗುತ್ತದೆ. ಕುಟುಂಬದ ಸದಸ್ಯರು ಯಾವುದೇ ಕಾರಣಕ್ಕೂ ಎದೆಗುಂದದೆ ಸಮಸ್ಯೆ ಎದುರಿಸುವುದಕ್ಕೆ ಬೇಕಾದ ಆರ್ಥಿಕ ಸಹಾಯ ಪ್ರಮಾಣಿಕವಾಗಿ ಮಾಡಲಾಗುತ್ತದೆ. ವೈದ್ಯಕೀಯ ಸೌಲಭ್ಯವನ್ನೂ ಒದಗಿಸಲಾಗುವುದು’ ಎಂದರು.
ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಕರೆ ಮಾಡಿ, ‘ಯುವಕನ ಸಮಸ್ಯೆಗೆ ಸೂಕ್ತ ಚಿಕಿತ್ಸೆ ನೀಡಿ ಗುಣ ಪಡಿಸಿ’ ಎಂದು ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.