ADVERTISEMENT

ಕಾಂಗ್ರೆಸ್‌ನಿಂದ ನಗರಸಭೆ ಸದಸ್ಯ ಉಚ್ಚಾಟನೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2021, 13:48 IST
Last Updated 29 ಜುಲೈ 2021, 13:48 IST


ಬೀದರ್: ಬಸವಕಲ್ಯಾಣ ನಗರಸಭೆ ಸದಸ್ಯ ರವೀಂದ್ರ ಗಾಯಕವಾಡ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.

ರವೀಂದ್ರ ಕಾಂಗ್ರೆಸ್‌ನಿಂದ ನಗರಸಭೆಗೆ ಆಯ್ಕೆಯಾಗಿದ್ದರು. ಆದರೆ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ವೇಳೆ ಬಿಜೆಪಿ ಪರ ಕೆಲಸ ಮಾಡಿದ್ದರು. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT