ADVERTISEMENT

ಪುರಸಭೆ ಸದಸ್ಯರು ಕಾಂಗ್ರೆಸ್ ಸೇರ್ಪಡೆ

ಪಕ್ಷದ ಧ್ವಜ ನೀಡಿ ಬರಮಾಡಿಕೊಂಡ ಶಾಸಕ ಪಾಟೀಲ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2021, 6:15 IST
Last Updated 12 ಏಪ್ರಿಲ್ 2021, 6:15 IST
ಹುಮನಾಬಾದ್‌ನಲ್ಲಿ ಭಾನುವಾರ ಶಾಸಕ ರಾಜಶೇಖರ ಪಾಟೀಲ ಅವರ ಸಮ್ಮುಖದಲ್ಲಿ ಇಬ್ಬರು ಪುರಸಭೆ ಸದಸ್ಯರು ಸೇರಿ 6 ಜನರು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾದರು
ಹುಮನಾಬಾದ್‌ನಲ್ಲಿ ಭಾನುವಾರ ಶಾಸಕ ರಾಜಶೇಖರ ಪಾಟೀಲ ಅವರ ಸಮ್ಮುಖದಲ್ಲಿ ಇಬ್ಬರು ಪುರಸಭೆ ಸದಸ್ಯರು ಸೇರಿ 6 ಜನರು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾದರು   

ಹುಮನಾಬಾದ್: ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ಭಾನುವಾರ ಪುರಸಭೆಯ ಇಬ್ಬರು ಸದಸ್ಯರು ಸೇರಿದಂತೆ 6 ಜನರು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಹಳ್ಳಿಖೇಡ (ಬಿ) ಪುರಸಭೆ ಸದಸ್ಯರಾದ ಅಬ್ದುಲ್‌ ಫಯುಮೋದ್ದಿನ್ ಮತ್ತು ಸರಸ್ವತಿ ಮಾಣಿಕ ಜಾಧವ ಹಾಗೂ ಮುಖಂಡರಾದ ಅಬ್ದುಲ್‌ ರಜಾಕ, ಅಸದ್ ಶಾ, ಸೈಯದ್‌ ಮುನಿರ್, ದಿಲೀಪ ಜಾಧವ ಅವರನ್ನು ಶಾಸಕ ರಾಜಶೇಖರ ಪಾಟೀಲ ಕಾಂಗ್ರೆಸ್ ಧ್ವಜ ನೀಡಿ ಬರಮಾಡಿಕೊಂಡರು.

ಶಾಸಕ ರಾಜಶೇಖರ ಪಾಟೀಲ ಮಾತನಾಡಿ, ‘ಜಾತ್ಯತೀತ ನಿಲುವು ಹೊಂದಿರುವ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ನಂಬಿ ಪಕ್ಷಕ್ಕೆ ಬಂದಿರುವುದು ಅತೀವ ಸಂತಸವಾಗಿದೆ.ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ಪರ ಇದ್ದು, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದೆ. ಎಲ್ಲ ಸಮುದಾಯದವರನ್ನು ಒಗ್ಗೂಡಿಸಿ ದೇಶವನ್ನು ಕಟ್ಟಲು ಪ್ರಾಮಾಣಿಕ
ಪ್ರಯತ್ನ ಮಾಡುತ್ತಿದೆ’ ಎಂದು ಹೇಳಿದರು.

ADVERTISEMENT

‘ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಗುರಿ ನಮ್ಮದಾಗಿದೆ. ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲಾಗುತ್ತಿದ್ದು, ಎಲ್ಲರೂ ಪಕ್ಷದ ಸಂಘಟನೆಯಲ್ಲಿ ತೊಡಗಬೇಕು’ ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.

ಶಾಸಕ ರಹೀಂ ಖಾನ್, ಬ್ಲಾಕ್ ಕಾಂಗ್ರೆಸ್ ಕಮೀಟಿ ಅಧ್ಯಕ್ಷ ಅಫ್ಸರ್ ಮಿಯ್ಯಾ, ಹುಮನಾಬಾದ್‌ನ ಯುವ ಕಾಂಗ್ರೆಸ್ ಕಮೀಟಿ ಅಧ್ಯಕ್ಷ ಉಮೇಶ ಜಮಗಿ, ಹಳ್ಳಿಖೇಡ (ಬಿ) ಪುರಸಭೆ ಅಧ್ಯಕ್ಷ ಮಾಹಾಂತಯ್ಯಾ ತೀರ್ಥ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಲಕ್ಷ್ಮಣರಾವ ಬುಳ್ಳಾ, ಯುಸುಫ್‌ ಸೌದಾಗರ, ಗುಂಡಾರೆಡ್ಡಿ ಪುಟಕಲ್, ಪ್ರಭು ತಾಳಮಡಗಿ, ಸುರೇಶ ಘಾಂಗ್ರೆ, ರವಿ ಘವಾಳಕಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.