ಔರಾದ್: ತಾಲ್ಲೂಕಿನ ಕೊಳ್ಳೂರ ಗ್ರಾಮದಲ್ಲಿ ಜಮೀನು ವಿವಾದ ಸಂಬಂಧ ವ್ಯಕ್ತಿಯೊಬ್ಬನನ್ನು ಇರಿದು ಕೊಲೆ ಮಾಡಿದ ಘಟನೆ ಶನಿವಾರ ರಾತ್ರಿ ನಡೆದಿದೆ.
ಗುರಯ್ಯ ಬಂಡಯ್ಯ ಸ್ವಾಮಿ(38) ಕೊಲೆಗೀಡಾದ ವ್ಯಕ್ತಿ. ಸಹೋದರ ಸಂಬಂಧಿ ಕಲ್ಲಯ್ಯ ಸ್ವಾಮಿ ಹಾಗೂ ಅವರ ಮಗನಾದ ವಿಜಯಕುಮಾರ ಸ್ವಾಮಿ ಕೊಲೆ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಕೊಳ್ಳೂರ ಗ್ರಾಮದಲ್ಲಿ ಶನಿವಾರ ಸಂಜೆ ಹೊತ್ತು ಜಗಳ ಮಾಡಿಕೊಂಡ ಈ ಸೋಹದರ ಸಂಬಂಧಿಗಳು ಗುರಯ್ಯ ಸ್ವಾಮಿಯನ್ನು ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ. ಸ್ಥಳದಲ್ಲಿದ್ದವರು ಅವರನ್ನು ಔರಾದ್ ಸಾರ್ವಜನಿಕ ಆಸ್ಪತ್ರೆಗೆ ತಂದು ಚಿಕಿತ್ಸೆ ಕೊಡಿಸಿದರೂ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಘಟನೆ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಡಿವೈಎಸ್‌ಪಿ ಶಿವಾನಂದ ಪವಾಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಿಂದ ಕೊಳ್ಳೂರ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ಚಿಂತಾಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.