
ಪ್ರಜಾವಾಣಿ ವಾರ್ತೆ
ಹುಮನಾಬಾದ್ ಬಳಿಯ ಮೊಳಕೇರಾಲ್ಲಿ ನಿಗೂಢ ಸ್ಫೋಟ! ಎಂಟು ಜನರಿಗೆ ಗಂಭೀರ ಗಾಯ
ಹುಮನಾಬಾದ್ (ಬೀದರ್ ಜಿಲ್ಲೆ): ತಾಲ್ಲೂಕಿನ ಮೊಳಕೇರಾ ಗ್ರಾಮದ ಮಧ್ಯಭಾಗದ ಬಯಲಿನಲ್ಲಿ ಶನಿವಾರ ಸಂಭವಿಸಿದ ನಿಗೂಢ ಸ್ಫೋಟದಿಂದ ಎಂಟು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ನೆಲದಡಿ ಸ್ಫೋಟವಾಗಿರುವ ಸಾಧ್ಯತೆ ಇದೆ.
ಗಾಯಗೊಂಡವರನ್ನು ಬೀದರ್ ನ ಬ್ರಿಮ್ಸ್ ನಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಡಿವೈಎಸ್ಪಿ ಮಡೋಳಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನಾ ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಸಿ, ಸಾರ್ವಜನಿಕರ ಓಡಾಟ ನಿರ್ಬಂಧಿಸಲಾಗಿದೆ.
ಘಟನೆಗೆ ನಿಖರ ಕಾರಣ ಇನ್ನಷ್ಟೇ ಗೊತ್ತಾಗಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.