ADVERTISEMENT

ನಾಗೋರಾ: ಸಂಭ್ರಮದ ಶಾಲಾ ವಾರ್ಷಿಕೋತ್ಸವ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2025, 12:16 IST
Last Updated 23 ಮಾರ್ಚ್ 2025, 12:16 IST
ಬೀದರ್ ತಾಲ್ಲೂಕಿನ ನಾಗೋರಾ ಗ್ರಾಮದಲ್ಲಿ ನಡೆದ ಜ್ಞಾನೋದಯ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫೂಲಮ್ಮ ಉದ್ಘಾಟಿಸಿದರು
ಬೀದರ್ ತಾಲ್ಲೂಕಿನ ನಾಗೋರಾ ಗ್ರಾಮದಲ್ಲಿ ನಡೆದ ಜ್ಞಾನೋದಯ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫೂಲಮ್ಮ ಉದ್ಘಾಟಿಸಿದರು   

ನಾಗೋರಾ(ಜನವಾಡ): ಬೀದರ್ ತಾಲ್ಲೂಕಿನ ನಾಗೋರಾ ಗ್ರಾಮದ ಜ್ಞಾನೋದಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 33ನೇ ವಾರ್ಷಿಕೋತ್ಸವ ಈಚೆಗೆ ಸಂಭ್ರಮದಿಂದ ನಡೆಯಿತು.

‘ಶಿಕ್ಷಣ ಮನುಷ್ಯನನ್ನು ಸಶಕ್ತನನ್ನಾಗಿ ಮಾಡುತ್ತದೆ’ ಎಂದು ಕಾರ್ಯಕ್ರಮದಲ್ಲಿ ಮಾತನಾಡಿದ ಕಲ್ಯಾಣ ಕರ್ನಾಟಕ ಅಶ್ವಿನಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕುಪೇಂದ್ರ ಎಸ್. ಅಶ್ವಿನಿ ಹೇಳಿದರು.

ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

ADVERTISEMENT

ಖಂಡಪ್ಪ ಪಾತರಪಳ್ಳಿ ಅಧ್ಯಕ್ಷತೆ ವಹಿಸಿದ್ದರು. ಸಮೂಹ ಸಂಪನ್ಮೂಲ ವ್ಯಕ್ತಿ ಗುಂಡೂರಾವ್ ಗುಪ್ತಾ, ಬಿ.ಆರ್.ಸಿ. ವಿಶ್ವನಾಥ ಸೂರ್ಯವಂಶಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫೂಲಮ್ಮ, ಮುಖ್ಯಶಿಕ್ಷಕ ಅನೂಪಕುಮಾರ, ಶಾಂತಮ್ಮ, ಅಶೋಕ, ರಾಮಕೃಷ್ಣ ಚಾರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.