ಬೀದರ್: ಶಾಸಕ ಬಿ.ನಾರಾಯಣರಾವ್ ಅವರ ಅಂತ್ಯಕ್ರಿಯೆ ಶುಕ್ರವಾರ (ಸೆ 25) ಮಧ್ಯಾಹ್ನ 12 ಗಂಟೆಗೆ ಬಸವಕಲ್ಯಾಣದ ಸಸ್ತಾಪುರ ಬಂಗ್ಲಾ ಸಮೀಪದ ಬೊಕ್ಕೆ ಲೇಔಟ್‌ನಲ್ಲಿ ನಡೆಯಲಿದೆ.
ನಾರಾಯಣರಾವ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಕನಿಷ್ಠ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಕೋವಿಡ್ 19 ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ ನೆರವೇರಿಸಲು ಕ್ರಮ ಕೈಗೊಳ್ಳುವಂತೆ ಬೀದರ್ ಜಿಲ್ಲಾಧಿಕಾರಿ ರಾಮಚಂದ್ರನ್ ಅವರಿಗೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಮೊಹಮ್ಮದ್ ನಯೀಮ್ ಮೊಮಿನ್ ಆದೇಶ ನೀಡಿದ್ದಾರೆ.
ಕೋವಿಡ್ ನಿಯಮದ ಪ್ರಕಾರ ಜಿಲ್ಲಾ ಆಡಳಿತವು ಕುಟುಂಬದ ಸದಸ್ಯರು ಸೇರಿ ಕೇವಲ 20 ಮಂದಿಗೆ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿದೆ.
ಪಾರ್ಥೀವ ಶರೀರದ ಮೆರವಣಿಗೆ ಹಾಗೂ ಅಂತಿಮ ದರ್ಶನಕ್ಕೆ ಅನುಮತಿ ಕೊಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಅನುಮತಿ ಕೊಟ್ಟರೆ ಮಾತ್ರ ಮೆರವಣಿಗೆ ನಡೆಸಲಾಗುವುದು ಎಂದು ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ನೀಲಕಂಠ ರಾಠೋಡ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.