ಜನವಾಡ: ‘ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಲಾಭ ಪಡೆಯಬೇಕು’ ಎಂದು ಪಿಡಿಒ ಉಮೇಶ ಜಾಬಾ ಹೇಳಿದರು.
ಬೀದರ್ ತಾಲ್ಲೂಕಿನ ಮರಕಲ್ ಗ್ರಾಮದಲ್ಲಿ ಬುಧವಾರ ನಡೆದ ಕಾಯಕ ಮಾಸಾಚರಣೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಕಾಯಕ ಮಾಸಾಚರಣೆ ಒಂದು ತಿಂಗಳು ಹೆಚ್ಚಿನ ಕೂಲಿ ಕಾರ್ಮಿಕರಿಗೆ ಕೆಲಸ ಕೊಡುವ ವಿಶೇಷ ಅಭಿಯಾನವಾಗಿದೆ’ ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಈಶ್ವರಮ್ಮ ಬಿ. ಓಂಕಾರೆ ಬಸವೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು, ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.