ಭಾಲ್ಕಿ: ‘ಗಡಿಭಾಗದಲ್ಲಿ ಬಸವಲಿಂಗ ಪಟ್ಟದ್ದೇವರು ಕಳೆದ ಮೂರು ದಶಕಗಳಿಂದ ಶೈಕ್ಷಣಿಕ ಕ್ರಾಂತಿ ಮಾಡುತ್ತಿರುವುದರಿಂದ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗ್ರಾಮೀಣ ಭಾಗದ ಬಡ ಮಕ್ಕಳು ಉತ್ತಮ ಸಾಧನೆ ತೋರುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಶುಕ್ರವಾರ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪಿಯು ಕಾಲೇಜಿನ 2024-25ನೇ ಸಾಲಿನ ನೀಟ್-ಐಐಟಿ ಸಾಧಕ ವಿದ್ಯಾರ್ಥಿಗಳನ್ಮು ಸನ್ಮಾನಿಸಿ ಅವರು ಮಾತನಾಡಿದರು.
‘ಪಟ್ಟದ್ದೇವರು ಕಟ್ಟಿದ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಪರೀಕ್ಷೆಗಳಲ್ಲಿ ಪ್ರತಿವರ್ಷ ರಾಜ್ಯಕ್ಕೆ ಉತ್ತಮ ಸ್ಥಾನ ತಂದು ಕೊಡುತ್ತಿದ್ದಾರೆ. ನೀಟ್‌ನಲ್ಲಿ ವಿದ್ಯಾರ್ಥಿ ವೇದಾಂತ ಲಕಡೆ 165 ಮತ್ತು ಐಐಟಿಯಲ್ಲಿ ಶಶಾಂಕ ಭೀಮಶಾ ಅವರು ರಾಷ್ಟ್ರ ಮಟ್ಟದಲ್ಲಿ ರ್ಯಾಂಕ್ ಪಡೆದು ರಾಜ್ಯದ ಕೀರ್ತಿಯನ್ನು ರಾಷ್ಟ್ರ ಮಟ್ಟದಲ್ಲಿ ಪಸರಿಸಿದ್ದಾರೆ. ಅವರ ಸಾಧನೆಗೆ ವೈಯಕ್ತಿಕವಾಗಿ ತಲಾ ₹1 ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡುತ್ತಿದ್ದೇನೆ’ ಎಂದು ತಿಳಿಸಿದರು.
ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಚನ್ನಬಸವೇಶ್ವರ ಗುರುಕುಲದ ಪ್ರಾಚಾರ್ಯ ಬಸವರಾಜ ಮೊಳಕೀರೆ ಸೇರಿದಂತೆ ಹಲವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.