ADVERTISEMENT

ನೂತನ ಡಿಡಿಪಿಐ ಬಾರಾಟಕೆಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 14 ಜನವರಿ 2022, 14:52 IST
Last Updated 14 ಜನವರಿ 2022, 14:52 IST
ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ಉಪ ನಿರ್ದೇಶಕ ಗಣಪತಿ ಬಾರಾಟಕೆ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ಬೀದರ್‌ನಲ್ಲಿ ಸನ್ಮಾನಿಸಲಾಯಿತು
ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ಉಪ ನಿರ್ದೇಶಕ ಗಣಪತಿ ಬಾರಾಟಕೆ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ಬೀದರ್‌ನಲ್ಲಿ ಸನ್ಮಾನಿಸಲಾಯಿತು   

ಬೀದರ್: ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ಉಪ ನಿರ್ದೇಶಕ ಗಣಪತಿ ಬಾರಾಟಕೆ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ನಗರದ ಉಪ ನಿರ್ದೇಶಕರ ಕಚೇರಿಯಲ್ಲಿ ಸನ್ಮಾನಿಸಲಾಯಿತು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಕಪಲಾಪೂರೆ ಅವರು ಶಾಲು ಹೊದಿಸಿ ಹೂಮಾಲೆ ಹಾಕಿ ಸತ್ಕರಿಸಿದರು.
ಎಲ್ಲರೂ ಜತೆಗೂಡಿ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಶ್ರಮಿಸೋಣ ಎಂದು ಈ ಸಂದರ್ಭದಲ್ಲಿ ಮಾತನಾಡಿದ ಬಾರಾಟಕೆ ನುಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಉಪಾಧ್ಯಕ್ಷ ಪಾಂಡುರಂಗ ಬೆಲ್ದಾರ್ ಮಾತನಾಡಿದರು.

ADVERTISEMENT

ಸಂಘದ ಗೌರವಾಧ್ಯಕ್ಷ ಬಸವರಾಜ ಜಕ್ಕಾ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ, ಸಂಜುಕುಮಾರ ಸೂರ್ಯವಂಶಿ, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಮದಾನೆ, ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ನಜೀಬೊದ್ದಿನ್, ಸಂಘಟನಾ ಕಾರ್ಯದರ್ಶಿ ಸೈಯದ್ ಅಸ್ಲಂ, ಖಜಾಂಚಿ ನರಸಪ್ಪ ಕೀರ್ತಿ, ಬೀದರ್ ತಾಲ್ಲೂಕು ಘಟಕದ ಗೌರವಾಧ್ಯಕ್ಷೆ ಶೋಭಾವತಿ ಜಂಜೀರೆ, ಅಧ್ಯಕ್ಷ ಬಾಬುರಾವ್ ಮಜಗೆ, ನರಸಪ್ಪ ಹಾಲಹಳ್ಳಿ, ವಾಚುಸಿಂಗ್ ರಾಠೋಡ್, ಶೇಕ್ ಅಹಮ್ಮದ್, ಮಕ್ಸೂದ್ ಅಲಿ, ಸುಲೋಚನಾ, ವೈಜಿನಾಥ ಸಾಗರ್, ಸುರೇಶ ಟಾಳೆ, ಗಣಪತಿ ಭಕ್ತಾ, ದೇವಿಪ್ರಸಾದ್ ಕಲಾಲ್, ಶ್ರೀಪತಿ ಮೇತ್ರೆ, ಡಿಡಿಪಿಐ ಕಚೇರಿ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.