ADVERTISEMENT

‘ಇಂದಿರಾ ಕ್ಯಾಂಟೀನ್‌ ಬಡವರಿಗೆ ಅನುಕೂಲ‘

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2025, 5:38 IST
Last Updated 26 ಡಿಸೆಂಬರ್ 2025, 5:38 IST
ಸಚಿವ ರಹೀಂ ಖಾನ್‌ ಅವರು ಬೀದರ್‌ನ ಓಲ್ಡ್‌ ಸಿಟಿಯಲ್ಲಿ ಗುರುವಾರ ನೂತನ ಇಂದಿರಾ ಕ್ಯಾಂಟೀನ್‌ ಉದ್ಘಾಟಿಸಿದ ನಂತರ ಉಪಾಹಾರ ಸವಿದರು
ಸಚಿವ ರಹೀಂ ಖಾನ್‌ ಅವರು ಬೀದರ್‌ನ ಓಲ್ಡ್‌ ಸಿಟಿಯಲ್ಲಿ ಗುರುವಾರ ನೂತನ ಇಂದಿರಾ ಕ್ಯಾಂಟೀನ್‌ ಉದ್ಘಾಟಿಸಿದ ನಂತರ ಉಪಾಹಾರ ಸವಿದರು   

ಬೀದರ್‌: ನಗರದ ಓಲ್ಡ್ ಸಿಟಿಯ ನೂರು ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಆವರಣದಲ್ಲಿ ನೂತನ ಇಂದಿರಾ ಕ್ಯಾಂಟೀನ್‌ ಅನ್ನು ಪೌರಾಡಳಿತ ಸಚಿವ ರಹೀಂ ಖಾನ್‌ ಗುರುವಾರ ಉದ್ಘಾಟಿಸಿದರು.

ಬಳಿಕ ಉಪಾಹಾರ ಸವಿದರು. 

ಬಡವರಿಗೆ, ಕೂಲಿ ಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್ ಅನುಕೂಲವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಸಿವು ಮುಕ್ತ ಕರ್ನಾಟಕ ನಿರ್ಮಿಸುವ ಗುರಿ ಹೊಂದಿದ್ದಾರೆ. ಅದಕ್ಕೆ ಪೂರಕವಾಗಿ ಇಂದಿರಾ ಕ್ಯಾಂಟೀನ್‌ ಆರಂಭಿಸಲಾಗಿದೆ. ಯಾರೂ ಹಸುವಿನಿಂದ ಇರಬಾರದು ಎಂಬ ಕಾರಣಕ್ಕೆ ನಗರ ಪ್ರದೇಶದ ಜನರಿಗೆ ಕೈಗೆಟುಕುವ ದರದಲ್ಲಿ ಆಹಾರ ನೀಡುವ ಉದ್ದೇಶದಿಂದ ಆರಂಭಿಸಲಾಗಿದೆ ಎಂದು ಹೇಳಿದರು.

ADVERTISEMENT

ನಗರದ ಓಲ್ಡ್ ಸಿಟಿಯ ಜನರಿಗೆ ಮತ್ತು ಆಸ್ಪತ್ರೆಗೆ ಬರುವ ಜನರಿಗೆ ಈ ಕ್ಯಾಂಟೀನ್ ಉಪಯುಕ್ತವಾಗಲಿದೆ. ಬೀದರ್‌ ನಗರದಲ್ಲಿ ಶೀಘ್ರವೇ ಮತ್ತೆ ಮೂರು ಹೊಸ ಇಂದಿರಾ ಕ್ಯಾಂಟೀನ್ ಆರಂಭವಾಗಲಿವೆ ಎಂದರು.

ನಗರದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ₹150 ಕೋಟಿ ಅನುದಾನ ವಿನಿಯೋಗಿಸಲಾಗುವುದು. ನಗರೋತ್ಥಾನ ಯೋಜನೆಯಡಿ ₹50 ಕೋಟಿಯಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಅಧ್ಯಕ್ಷ ಮುಹಮ್ಮದ್‌ ಗೌಸ್‌, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶಿವರಾಜ್ ರಾಠೋಡ್‌ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.