ADVERTISEMENT

ಹೊಸ ಕೈಗಾರಿಕಾ ನೀತಿ ಅರಿವು ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 14:50 IST
Last Updated 18 ಜನವರಿ 2021, 14:50 IST

ಬೀದರ್: ಕರ್ನಾಟಕ ಸಣ್ಣ ಕೈಗಾರಿಕೆಗಳ ಒಕ್ಕೂಟ(ಕಾಸಿಯಾ)ದ ವತಿಯಿಂದ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಪ್ರತಾಪನಗರದ ಶಾರದಾ ಆರ್‌ಸೆಟಿ ಸಭಾಂಗಣದಲ್ಲಿ ಮಂಗಳವಾರ (ಜ.19) ಮಧ್ಯಾಹ್ನ 2.30ಕ್ಕೆ ಹೊಸ ಕೈಗಾರಿಕೆ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳ ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ.

ಸಂಸದ ಭಗವಂತ ಖೂಬಾ ಉದ್ಘಾಟಿಸುವರು. ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕಿ ಸುರೇಖಾ ಮುನೋಳಿ, ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಬಿ.ಜಿ. ಶೆಟಕಾರ್, ಎಚ್.ಎಂ. ಶ್ರೀನಿವಾಸ, ಶಿವರಾಜ ಹಲಶೆಟ್ಟಿ, ಪಿ. ವಿಜಯಕುಮಾರ, ಜೆ.ಕೆ. ದೇವೇಂದ್ರಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾಸಿಯಾ ಅಧ್ಯಕ್ಷ ಕೆ.ಬಿ. ಅರಸಪ್ಪ ಅಧ್ಯಕ್ಷತೆ ವಹಿಸುವರು ಎಂದು ಹೇಳಿಕೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT