ADVERTISEMENT

ನೌಕರರ ಸಂಘಕ್ಕೆ ಮೂವರ ನಾಮ ನಿರ್ದೇಶನ

ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಸನ್ಮಾನ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2020, 5:26 IST
Last Updated 22 ನವೆಂಬರ್ 2020, 5:26 IST
ಬೀದರ್‌ನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಹುದ್ದೆಗಳಿಗೆ ನಾಮ ನಿರ್ದೇಶನಗೊಂಡ ಸತೀಶ ಪಾಟೀಲ, ಪ್ರೊ. ರಾಜಕುಮಾರ ಹೊಸದೊಡ್ಡೆ ಹಾಗೂ ಮನೋಹರ ಕಾಶಿ ಅವರನ್ನು ಸನ್ಮಾನಿಸಲಾಯಿತು
ಬೀದರ್‌ನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಹುದ್ದೆಗಳಿಗೆ ನಾಮ ನಿರ್ದೇಶನಗೊಂಡ ಸತೀಶ ಪಾಟೀಲ, ಪ್ರೊ. ರಾಜಕುಮಾರ ಹೊಸದೊಡ್ಡೆ ಹಾಗೂ ಮನೋಹರ ಕಾಶಿ ಅವರನ್ನು ಸನ್ಮಾನಿಸಲಾಯಿತು   

ಬೀದರ್: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಮೂರು ಹುದ್ದೆಗಳಿಗೆ ಜಿಲ್ಲೆಯ ಮೂವರನ್ನು ನಾಮ ನಿರ್ದೇಶನ ಮಾಡಲಾಗಿದೆ.
ಸತೀಶ ಪಾಟೀಲ (ಸಂಘಟನಾ ಕಾರ್ಯದರ್ಶಿ), ಪ್ರೊ. ರಾಜಕುಮಾರ ಹೊಸದೊಡ್ಡೆ ಹಾಗೂ ಮನೋಹರ ಕಾಶಿ (ಸಾಂಸ್ಕøತಿಕ ಕಾರ್ಯದರ್ಶಿಗಳು) ನಾಮ ನಿರ್ದೇಶನಗೊಂಡವರಲ್ಲಿ ಸೇರಿದ್ದಾರೆ.

ಸನ್ಮಾನ: ನಗರದ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ರಾಜ್ಯ ಘಟಕಕ್ಕೆ ನಾಮ ನಿರ್ದೇಶನಗೊಂಡ ಮೂವರನ್ನು ಸನ್ಮಾನಿಸಲಾಯಿತು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಅವರು ಜಿಲ್ಲೆಯ ಮೂವರಿಗೆ ರಾಜ್ಯ ಘಟಕದಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಿರುವುದು ಸಂತಸ ಉಂಟು ಮಾಡಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಹೇಳಿದರು.

ADVERTISEMENT

ಸಂಘವು ಜಿಲ್ಲೆಯ ಸರ್ಕಾರಿ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಸರ್ವ ಪ್ರಯತ್ನ ನಡೆಸುತ್ತಿದೆ. ನೌಕರರಿಗೆ ಪ್ರೇರಣಾತ್ಮಕ ಕಾರ್ಯಕ್ರಮ ಹಾಗೂ ಒತ್ತಡ ಕಡಿಮೆ ಮಾಡಲು ಕ್ರೀಡಾಕೂಟಗಳನ್ನು ಸಂಘಟಿಸುತ್ತಿದೆ. ವಿವಿಧ ಪರೀಕ್ಷೆಗಳಲ್ಲಿ ಸಾಧನೆಗೈಯುವ ನೌಕರರ ಮಕ್ಕಳಿಗೆ ಸನ್ಮಾನಿಸಿ ಪ್ರೋತ್ಸಾಹಿಸುವ ಕೆಲಸವನ್ನೂ ಮಾಡುತ್ತಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದ ನವೀಕರಣ ಕಾರ್ಯ ಪೂರ್ಣಗೊಂಡಿದ್ದು, ಶೀಘ್ರ ಉದ್ಘಾಟನೆಗೊಳ್ಳಲಿದೆ. ಬಳಿಕ ನೌಕರರಿಗೆ ವಿವಿಧ ಕಾರ್ಯಕ್ರಮ ಆಯೋಜನೆಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಸಂಘದ ರಾಜ್ಯ ಪರಿಷತ್ ಸದಸ್ಯ ಪ್ರಕಾಶ ಮಡಿವಾಳ, ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ರಾಜಕುಮಾರ ಪಾಟೀಲ, ಉಪಾಧ್ಯಕ್ಷರಾದ ಬಸವರಾಜ ಜಕ್ಕಾ, ಪ್ರಭುಲಿಂಗ ತೂಗಾವೆ, ಓಂಕಾರ ಮಲ್ಲಿಗೆ, ಬಕ್ಕಪ್ಪ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ, ಖಜಾಂಚಿ ಅಶೋಕ ರೆಡ್ಡಿ, ಸಹ ಕಾರ್ಯದರ್ಶಿ ಶಿವಕುಮಾರ ಬಾವಗೆ, ಪ್ರಚಾರ ಕಾರ್ಯದರ್ಶಿ ಯೋಗೇಂದ್ರ ಯದಲಾಪುರೆ, ಓಂಪ್ರಕಾಶ ದಡ್ಡೆ, ಬಳವಂತರಾವ್ ರಾಠೋಡ್, ಪ್ರಕಾಶ ಮಾಳಗೆ, ಉಮೇಶ ಪಾಟೀಲ, ಶಿವರಾಜ ಕಪಲಾಪುರೆ, ಪಾಂಡುರಂಗ ಬೆಲ್ದಾರ್, ಅನ್ಸಾರ್ ಬೇಗ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.