ADVERTISEMENT

ಬೀದರ್: ಬ್ಯಾಂಕ್ ಖಾತೆಗೆ ‘ಆಧಾರ್’ ಜೋಡಿಸಿ

1,594 ವಿದ್ಯಾರ್ಥಿಗಳ ಖಾತೆಗೆ ಜಮಾ ಆಗದ ಶಿಷ್ಯವೇತನ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2021, 16:47 IST
Last Updated 11 ಮಾರ್ಚ್ 2021, 16:47 IST

ಬೀದರ್: ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮವನ್ನು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಆಧಾರ್ ಸಂಖ್ಯೆ ಜೋಡಣೆಯಾದ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಶಿಷ್ಯವೇತನ ಮೊತ್ತ ಜಮಾ ಮಾಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಬೀದರ್ ತಾಲ್ಲೂಕು ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ ತಿಳಿಸಿದ್ದಾರೆ.

2018-19 ಹಾಗೂ 2019-20ನೇ ಸಾಲಿನಲ್ಲಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಮೂಲಕ ಬೀದರ್ ತಾಲ್ಲೂಕಿನಲ್ಲಿ ಅರ್ಜಿ ಸಲ್ಲಿಸಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಪೈಕಿ ಆಧಾರ್ ಸಂಖ್ಯೆ ಜೋಡಣೆಯಾಗದ ಕಾರಣ 1,594 ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಶಿಷ್ಯವೇತನ ಜಮಾ ಆಗಿಲ್ಲ ಎಂದು ಹೇಳಿದ್ದಾರೆ.

ಮೆಟ್ರಿಕ್ ಪೂರ್ವ ಶಿಷ್ಯವೇತನ ಮಂಜೂರಾಗದೇ ಇದ್ದಲ್ಲಿ ಮುಂದಿನ ತರಗತಿಗಳಿಗೆ ಶಿಷ್ಯವೇತನ ಮಂಜೂರಾತಿ ಸಾಧ್ಯವಾಗುವುದಿಲ್ಲ. 2019-20ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಶಿಷ್ಯವೇತನಕ್ಕಾಗಿ 6,179 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, ಇವರಲ್ಲಿ 178 ವಿದ್ಯಾರ್ಥಿಗಳ ಬ್ಯಾಂಕ್ ಖಾತೆ ಸಂಖ್ಯೆಗೆ ಆಧಾರ್ ಸಂಖ್ಯೆ ಜೋಡಣೆಯಾಗಿಲ್ಲ ಎಂದು ತಿಳಿಸಿದ್ದಾರೆ.

ADVERTISEMENT

ಶಿಷ್ಯವೇತನ ಮಂಜೂರಾತಿಗೆ ವಿದ್ಯಾರ್ಥಿಗಳು ಮಾರ್ಚ್ 15ರ ಒಳಗೆ ತಮ್ಮ ಬ್ಯಾಂಕ್ ಖಾತೆ ಸಂಖ್ಯೆಗೆ ಆಧಾರ್ ಸಂಖ್ಯೆ ಜೋಡಿಸಿ, ನ್ಯಾಷನಲ್ ಕಾರ್ಪೋರೇಷನ್ ಆಫ್ ಇಂಡಿಯಾದೊಂದಿಗೆ ಲಿಂಕ್ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.