ಬೀದರ್: ಜಿಲ್ಲೆಯ ಕೆಲ ತಾಲ್ಲೂಕುಗಳಲ್ಲಿ ಶುಕ್ರವಾರ ಸಾಧಾರಣ ಮಳೆಯಾಗಿದೆ. ನಗರದಲ್ಲಿ ಸಂಜೆ ಅರ್ಧಗಂಟೆ ಜೋರಾಗಿ ಮಳೆ ಸುರಿದೆ.
ಕಮಲನಗರ ತಾಲ್ಲೂಕಿನ ಠಾಣಾಕುಶನೂರ ಹೋಬಳಿಯಲ್ಲಿ 85 ಮಿಲಿ ಮೀಟರ್ ಹಾಗೂ ಭಾಲ್ಕಿ ತಾಲ್ಲೂಕಿನ ನಿಟ್ಟೂರ್ ಹೋಬಳಿಯಲ್ಲಿ 69 ಮಿಲಿ ಮೀಟರ್ ಮಳೆಯಾಗಿದೆ. ಬೀದರ್, ಭಾಲ್ಕಿ, ಔರಾದ್, ಕಮಲನಗರ ಹಾಗೂ ಹುಲಸೂರು ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.