ಭಾಲ್ಕಿ: ‘ಜ.15 ರಂದು ಸಾರ್ವಜನಿಕವಾಗಿ ನಾನು ಜನ್ಮದಿನ ಆಚರಿಸಿಕೊಳ್ಳುತ್ತಿಲ್ಲ. ಹಾಗಾಗಿ ಅಭಿಮಾನಿಗಳು, ಕಾರ್ಯಕರ್ತರು ಬ್ಯಾನರ್ ಕಟೌಟ್ ಹಾಕಿಕೊಂಡು ದುಂದು ವೆಚ್ಚ ಮಾಡಬಾರದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
‘ಜ.14ರಿಂದ 16ರವರೆಗೆ ನಾನು ಬೀದರ್ ಜಿಲ್ಲೆಯಿಂದ ಹೊರಗೆ ಇರಲಿದ್ದೇನೆ. ಜಿಲ್ಲೆಯ ಜನರ ಪ್ರೀತಿ, ವಿಶ್ವಾಸ ಎಂದಿಗೂ ಮರೆಯುವುದಿಲ್ಲ. ಹಾಗಾಗಿ ಯಾರೂ ಕೂಡ ಫ್ಲೆಕ್ಸ್, ಬ್ಯಾನರ್ ಹಾಕದೇ ತಾವು ಇದ್ದ ಸ್ಥಳದಿಂದಲೇ ಶುಭ ಹಾರೈಸಬೇಕು’ ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.