ADVERTISEMENT

ಔರಾದ್: ಅಂಗನವಾಡಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಸಿಇಒ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2024, 14:36 IST
Last Updated 24 ಅಕ್ಟೋಬರ್ 2024, 14:36 IST
ಔರಾದ್ ತಾಲ್ಲೂಕಿನ ಕೌಡಗಾಂವ ಅಂಗನವಾಡಿ ಕೇಂದ್ರಕ್ಕೆ ಜಿ.ಪಂ ಸಿಇಒ ಗಿರೀಶ ಬದೋಲೆ ಭೇಟಿ ನೀಡಿ ಪರಿಶೀಲಿಸಿದರು
ಔರಾದ್ ತಾಲ್ಲೂಕಿನ ಕೌಡಗಾಂವ ಅಂಗನವಾಡಿ ಕೇಂದ್ರಕ್ಕೆ ಜಿ.ಪಂ ಸಿಇಒ ಗಿರೀಶ ಬದೋಲೆ ಭೇಟಿ ನೀಡಿ ಪರಿಶೀಲಿಸಿದರು   

ಔರಾದ್: ‘ತಾಲ್ಲೂಕಿನ ವಿವಿಧೆಡೆ ಇರುವ ಅಪೂರ್ಣವಾಗಿರುವ ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು’ ಎಂದು ಜಿ.ಪಂ ಸಿಇಒ ಡಾ.ಗಿರೀಶ ಬದೋಲೆ ಹೇಳಿದರು.

‘ತಾಲ್ಲೂಕಿನಲ್ಲಿ 2017ರಿಂದ ಕೆಲ ಅಂಗನವಾಡಿ ಕಟ್ಟಡ ಕಾಮಗಾರಿ ಪೂರ್ಣ ಆಗಿಲ್ಲ ಎಂಬುದು ನನ್ನ ಗಮನಕ್ಕೂ ಬಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ನರೇಗಾ ಯೋಜನೆಯಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಅನುದಾನ ಕೊರತೆಯಿಂದ ಕಾಮಗಾರಿ ಅಲ್ಲಿಗೆ ನಿಂತಿದೆ. ಈಗ ಕೆಕೆಆರ್ಡಿಬಿ ಅನುದಾನ ಬಳಸಿಕೊಂಡು ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಶನಿವಾರ ‘7 ಅಂಗನವಾಡಿ ಕಟ್ಟಡ ಅಪೂರ್ಣ’ ಎಂಬ ಶೀರ್ಷಿಕೆಯಡಿ ಪ್ರಕಟಿಸಿದ ವರದಿಗೆ ಸ್ಪಂದಿಸಿದ ಅವರು ಗುರುವಾರ ಕೌಡಗಾಂವ ಅಪೂರ್ಣ ಅಂಗನವಾಡಿ ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

‘ಎಲ್ಲಿ ಅಂಗನವಾಡಿ ಕಟ್ಟಡದ ಅಗತ್ಯವಿದೆಯೋ, ಅಲ್ಲಿ ಹೊಸ ಕಟ್ಟಡ ನಿರ್ಮಿಸಲಾಗುವುದು. ಶಿಥಿಲಗೊಂಡ ಜೀರ್ಗಾ(ಬಿ) ಸರ್ಕಾರಿ ಶಾಲೆಗೂ ಹೊಸ ಕಟ್ಟಡದ ಪ್ರಸ್ತಾವನೆ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗ ಸೂಚಿಸಲಾಗಿದೆ’ ಎಂದು ಹೇಳಿದರು.

ಕೌಡಗಾಂವ, ಜೀರ್ಗಾ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ಮಕ್ಕಳಿಗೆ ಕೊಡುವ ಆಹಾರ ಹಾಗೂ ಶಿಕ್ಷಣದ ಕುರಿತು ಪರಿಶೀಲಿಸಿದರು.

ಔರಾದ್ ಪಟ್ಟಣದಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಸುವ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಕ್ಕೆ ಭೇಟಿ ನೀಡಿ ಆಹಾರದ ಪ್ಯಾಕೇಟ್ಗಳು ಪರಿಶೀಲಿಸಿದರು.

ಔರಾದ್ ಪಟ್ಟಣದ ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಸುವ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಕ್ಕೆ ಜಿ.ಪಂ ಸಿಇಒ ಗಿರೀಶ ಬದೋಲೆ ಭೇಟಿ ನೀಡಿ ಪರಿಶೀಲಿಸಿದರು

ತಾ.ಪಂ ಇಒ ಮಾಣಿಕರಾವ ಪಾಟೀಲ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀಧರ, ನಿರೂಪಣಾಧಿಕಾರಿ ಗುರುರಾಜ, ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಖಲೀಲ್, ಮೇಲ್ವಿಚಾರಕಿ ವಿಜಯಲಕ್ಷ್ಮಿ, ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರದ ಮೇಲ್ವಿಚಾರಕಿ ದೀಪಾಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.