ಬೀದರ್: ಪಕ್ಷದ ವಿರುದ್ಧ ಹೇಳಿಕೆ ನೀಡಿರುವ ಇಬ್ಬರಿಗೆ ಕಾರಣ ಕೇಳಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಪಾಟೀಲ ನೋಟಿಸ್ ನೀಡಿದ್ದಾರೆ.
ಭಾಲ್ಕಿ ತಾಲ್ಲೂಕು ಮಹಿಳಾ ಮಂಡಲದ ಅಧ್ಯಕ್ಷೆ ತಾರಾಬಾಯಿ ಕೊಳ್ಳಾ ಹಾಗೂ ಬಸವಕಲ್ಯಾಣ ನಗರ ಘಟಕದ ಅಧ್ಯಕ್ಷ ಶಿವಕುಮಾರ ಅಗ್ರೆ ಪಕ್ಷದ ವಿರುದ್ಧ ಹೇಳಿಕೆ ನೀಡಿರುವುದರಿಂದ ನೋಟಿಸ್ ನೀಡಲಾಗಿದೆ. ಮುಂದಿನ ಮೂರು ದಿನಗಳಲ್ಲಿ ಉತ್ತರಿಸಬೇಕು ಇಲ್ಲದಿದ್ದರೆ ತಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಪಾಟೀಲ ಎಚ್ಚರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.