ADVERTISEMENT

‘ನರೇಗಾ ಸದುಪಯೋಗ ಪಡೆಯಿರಿ’

ತೋರಣಾ: ರೋಜಗಾರ್ ದಿವಸ್ ಆಚರಣೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2022, 4:23 IST
Last Updated 5 ಜನವರಿ 2022, 4:23 IST
ಕಮಲನಗರ ತಾಲ್ಲೂಕಿನ ತೋರಣಾ ಗ್ರಾಮದ ನರೇಗಾ ಕಾಮಗಾರಿ ಸ್ಥಳದಲ್ಲಿ ರೋಜಗಾರ್ ದಿವಸ್ ಆಚರಿಸಲಾಯಿತು
ಕಮಲನಗರ ತಾಲ್ಲೂಕಿನ ತೋರಣಾ ಗ್ರಾಮದ ನರೇಗಾ ಕಾಮಗಾರಿ ಸ್ಥಳದಲ್ಲಿ ರೋಜಗಾರ್ ದಿವಸ್ ಆಚರಿಸಲಾಯಿತು   

ಕಮಲನಗರ: ತಾಲ್ಲೂಕಿನ ತೋರಣಾ ಗ್ರಾಮದ ಉದ್ಯೋಗ ಖಾತ್ರಿ ಕಾಮಗಾರಿ ಸ್ಥಳದಲ್ಲಿ ರೋಜಗಾರ್ ದಿವಸ್ ಆಚರಿಸಲಾಯಿತು.

ನರೇಗಾ ಯೋಜನೆ ತಾಲ್ಲೂಕು ಪಂಚಾಯಿತಿ ಐ.ಇ.ಸಿ ಸಂಯೋಜಕಿ ಸವಿತಾ ನಾಗೇಶ ಬನ್ನಾಳೆ ಮಾತನಾಡಿ,‘ಗ್ರಾಮೀಣ ಪ್ರದೇಶಗಳಿಗೆ ಮೂಲಸೌಕರ್ಯ ಕಲ್ಪಿಸಲು ಹಾಗೂ ಗುಳೆ ತಪ್ಪಿಸಲು ನರೇಗಾ ಯೋಜನೆ ರೂಪಿಸಲಾಗಿದೆ. ನರೇಗಾ ಅಡಿ ಗ್ರಾಮೀಣ ಪ್ರದೇಶಗಳಲ್ಲಿ ಹಲವು ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆ ಯಶಸ್ಸಿಗೆ ಕಾರ್ಮಿಕರ ಶ್ರಮವೇ ಮೂಲಾಧಾರವಾಗಿದೆ’ ಎಂದರು.

ಈ ವೇಳೆ ನರೇಗಾ ಯೋಜನೆಯಡಿ ಸರ್ಕಾರಿ ಜಮೀನಿನಲ್ಲಿ ಕೆರೆ ನಿರ್ಮಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.

ADVERTISEMENT

ಗ್ರಾಮ ಪಂಚಾಯಿತಿ ಡಿಇಒ ರಾಜಕುಮಾರ.ವಿ.ಜಾಧವ, ಮೇಟಿ ತಾನಾಜಿ ಡೊಂಗ್ರೆ, ಪಂಚಾಯಿತಿ ಸದಸ್ಯರು ಹಾಗೂ ಕಾರ್ಮಿಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.