ಹುಲಸೂರ: ನರೇಗಾ ಯೋಜನೆಯಡಿ ನೋಂದಾಯಿತರಾದ ತಾಲ್ಲೂಕಿನ ಎಲ್ಲ ಗ್ರಾಮೀಣ ಕುಟುಂಬಗಳ ಉದ್ಯೋಗ ಚೀಟಿ ಇ-ಕೆವೈಸಿ ಪ್ರಕ್ರಿಯೆಯನ್ನು ತಾಲ್ಲೂಕು ಪಂಚಾಯಿತಿ ನರೇಗಾ ಸಿಬ್ಬಂದಿ ಶೀಘ್ರ ಪೂರ್ಣಗೊಳಿಸಬೇಕು' ಎಂದು ತಾಲ್ಲೂಕು ಪಂಚಾಯಿತಿ ಇಒ ಮಹಾದೇವ ಜಮ್ಮು ತಿಳಿಸಿದರು.
ಸಂಬಂಧಿಸಿದ ಸಿಬ್ಬಂದಿ, ನರೇಗಾ ಕೂಲಿಕಾರರ ಮನೆ ಮನೆಗೆ ತೆರಳಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ತಾಲ್ಲೂಕಿನ 7 ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ನರೇಗಾ ಸಿಬ್ಬಂದಿಯಾದ ಗ್ರಾಮ ಕಾಯಕ ಮಿತ್ರ, ಬಿ.ಎಫ್.ಟಿ. ಹಾಗೂ ತಾಂತ್ರಿಕ ಸಹಾಯಕರಿಗೆ ಇ-ಕೆವೈಸಿ ಕುರಿತು ತರಬೇತಿ ನೀಡಲಾಗಿದೆ. ಗ್ರಾಮ ಪಂಚಾಯಿತಿಗಳ ಇತರ ಸಿಬ್ಬಂದಿಯನ್ನು ಬಳಸಿಕೊಂಡು ಸಕ್ರಿಯ ಕೂಲಿಕಾರರ ಜಾಬ್ ಕಾರ್ಡ್‌ಗಳನ್ನು ಇ-ಕೆವೈಸಿ ಮೂಲಕ ಪರಿಶೀಲಿಸುವ ಕಾರ್ಯ ತುರ್ತಾಗಿ ನಡೆಯಬೇಕು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.