ADVERTISEMENT

ಅಲಿಯಂಬರ್‌ನಲ್ಲಿ ನುಡಿ ಹಬ್ಬ ಇಂದು

ಸಮಾರೋಪಕ್ಕೆ ಕಿರುತೆರೆ ನಟಿ ರಂಜಿನಿ ರಾಘವನ್

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2023, 14:22 IST
Last Updated 7 ಫೆಬ್ರುವರಿ 2023, 14:22 IST
ರಂಜಿನಿ ರಾಘವನ್
ರಂಜಿನಿ ರಾಘವನ್   

ಜನವಾಡ: ಇಲ್ಲಿಗೆ ಸಮೀಪದ ಅಲಿಯಂಬರ್ ಗ್ರಾಮದ ಶರಣ ವೀರಭದ್ರಪ್ಪ ಅಪ್ಪ ಕಲ್ಯಾಣ ಮಂಟಪದಲ್ಲಿ ಬುಧವಾರ (ಫೆ. 8) ಬೀದರ್ ತಾಲ್ಲೂಕು ಏಳನೆಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಬೆಳಿಗ್ಗೆ 8.30ಕ್ಕೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಿಂದ ಕಲ್ಯಾಣ ಮಂಟಪದ ವರೆಗೆ ಸಾರೋಟಿನಲ್ಲಿ ಸಮ್ಮೇಳನಾಧ್ಯಕ್ಷ ಓಂಪ್ರಕಾಶ ದಡ್ಡೆ ಹಾಗೂ ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆ ಜರುಗಲಿದೆ.

ಬೆಳಿಗ್ಗೆ 10.30ಕ್ಕೆ ಕಲ್ಯಾಣ ಮಂಟಪದಲ್ಲಿ ನಡೆಯುವ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಸದಾನಂದ ಜೋಶಿ ಸಮ್ಮೇಳನಕ್ಕೆ ಚಾಲನೆ ನೀಡುವರು. ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ ಪುಸ್ತಕ ಮಳಿಗೆ ಉದ್ಘಾಟಿಸುವರು. ಬಿಡಿಎ ಅಧ್ಯಕ್ಷ ಬಾಬುವಾಲಿ ಚಿತ್ರಕಲಾ ಪ್ರದರ್ಶನ ಉದ್ಘಾಟಿಸುವರು. ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಸಹಕಾರ ಆಸ್ಪತ್ರೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಪುಸ್ತಕ ಬಿಡುಗಡೆ ಮಾಡುವರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಆಶಯ ನುಡಿ ಆಡುವರು.

ADVERTISEMENT

ಪ್ರಮುಖರಾದ ರಾಜೇಂದ್ರಕುಮಾರ ಗಂದಗೆ, ಪ್ರೊ. ಸಿದ್ರಾಮಪ್ಪ ಮಾಸಿಮಾಡೆ, ವಿಜಯಕುಮಾರ ಬೆಳಮಗಿ, ಪ್ರಭುಲಿಂಗ ತೂಗಾವೆ, ಮಹಾದೇವ ಬಿರಾದಾರ, ಸಂಗಮೇಶ ಪಾಟೀಲ, ಪೀರಪ್ಪ ಯರನಳ್ಳಿ, ದೀಪಕ್ ಗಾದಗೆ, ಕಾಮಶೆಟ್ಟಿ ಘೋಡಂಪಳ್ಳೆ, ರಾಜೇಂದ್ರ ಪೂಜಾರಿ, ರಿತೇಶ ಬೀರನಳ್ಳೆ, ಸಿದ್ದೋಬಾ ಲೌಟೆ ಪಾಲ್ಗೊಳ್ಳುವರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ರಮೇಶ ಮೂಲಗೆ ಸಮ್ಮೇಳನಾಧ್ಯಕ್ಷರಿಗೆ ಪರಿಷತ್ತಿನ ಧ್ವಜ ಹಸ್ತಾಂತರ ಮಾಡುವರು.

ಶಾಸಕ ರಹೀಂಖಾನ್ ಅಧ್ಯಕ್ಷತೆ ಹಾಗೂ ಓಂಪ್ರಕಾಶ ದಡ್ಡೆ ಸಮ್ಮೇಳನಾಧ್ಯಕ್ಷತೆ ವಹಿಸುವರು. ಮಧ್ಯಾಹ್ನ 1ಕ್ಕೆ ಸಾಹಿತಿ ಗುರುನಾಥ ಅಕ್ಕಣ್ಣ ಅಧ್ಯಕ್ಷತೆಯಲ್ಲಿ ಪ್ರಥಮ ಗೋಷ್ಠಿ, ಮಧ್ಯಾಹ್ನ 2ಕ್ಕೆ ಕಲಾವಿದ ಶಂಭುಲಿಂಗ ವಾಲ್ದೊಡ್ಡಿ ಅಧ್ಯಕ್ಷತೆಯಲ್ಲಿ ದ್ವಿತೀಯ ಗೋಷ್ಠಿ ಹಾಗೂ ಮಧ್ಯಾಹ್ನ 3.20ಕ್ಕೆ ಕೇಂದ್ರ ಕಸಾಪ ಮಹಿಳಾ ಪ್ರತಿನಿಧಿ ಮಲ್ಲಮ್ಮ ಪಾಟೀಲ ಅಧ್ಯಕ್ಷತೆಯಲ್ಲಿ ತೃತೀಯ ಗೋಷ್ಠಿ ಜರುಗಲಿದೆ.
ಸಂಜೆ 6.15ಕ್ಕೆ ಸಾಧಕರ ಸನ್ಮಾನ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ. ಕಿರುತೆರೆ ನಟಿ ರಂಜಿನಿ ರಾಘವನ್ ವಿಶೇಷ ಆಹ್ವಾನಿತರಾಗಿ, ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕನ್ನಡ ಸಾಹಿತ್ಯ ಪರಿಷತ್ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್. ಮನೋಹರ ಅಧ್ಯಕ್ಷತೆ ವಹಿಸುವರು. ಓಂಪ್ರಕಾಶ ದಡ್ಡೆ ಸಮ್ಮೇಳನಾಧ್ಯಕ್ಷರ ನುಡಿ ಆಡುವರು. ಕರ್ನಾಟಕ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಬಸವರಾಜ ಬಲ್ಲೂರ ಸಮಾರೋಪ ಭಾಷಣ ಮಾಡುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.