
ಭಾಲ್ಕಿ: ತಾಲ್ಲೂಕಿನ ಕಟ್ಟಿತೂಗಾಂವ ಗ್ರಾಮ ಸಮೀಪದ ಮಸೀದಿ ಬಳಿ, ಚಳಕಾಪುರ ಗ್ರಾಮಕ್ಕೆ ತೆರಳುವ ರಸ್ತೆ, ಬಸವ ಸಂದೇಶ ಶಾಲೆ ಬಳಿಯ ರಸ್ತೆ ಮಧ್ಯೆ ನಿರ್ಮಾಣಗೊಂಡಿದ್ದ ಆಳವಾದ ತಗ್ಗು ಗುಂಡಿಗಳು ಗುರುವಾರ ಮುಚ್ಚಲಾಯಿತು.
ಸಂಬಂಧಪಟ್ಟವರ ನಿರ್ಲಕ್ಷ್ಯದಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ತುಂಬಾ ತೊಂದರೆ ಉಂಟಾಗುತ್ತಿತ್ತು. ಅನೇಕ ಜನ ವಾಹನ ಸವಾರರು ಮಳೆ ಸುರಿಯುತ್ತಿರುವ ಸಂದರ್ಭದಲ್ಲಿ ಮತ್ತು ರಾತ್ರಿ ಹೊತ್ತಿನಲ್ಲಿ ಸಂಚರಿಸುವಾಗ ಈ ತಗ್ಗು ಗುಂಡಿಗಳಲ್ಲಿ ಬಿದ್ದು ಗಾಯ ಮಾಡಿಕೊಂಡ ಕುರಿತು ‘ಪ್ರಜಾವಾಣಿ ‘ರಸ್ತೆ ಮಧ್ಯೆ ತಗ್ಗುಗುಂಡಿ ನಿರ್ಮಾಣ’ ಎಂಬ ಶೀರ್ಷಿಕೆ ಅಡಿಯಲ್ಲಿ ವರದಿ ಪ್ರಕಟಿಸಲಾಗಿತ್ತು.
ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ತಗ್ಗು ಗುಂಡಿಗಳನ್ನು ಮುಚ್ಚಿ ಸಾರ್ವಜನಿಕರ ಸುಗಮ ಓಡಾಟಕ್ಕೆ, ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.