ADVERTISEMENT

ಬೀದರ್ | ಹಳೆ ವಿದ್ಯಾರ್ಥಿಗಳಿಂದ ಜಯಂತ್ಯುತ್ಸವ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2019, 13:56 IST
Last Updated 24 ಡಿಸೆಂಬರ್ 2019, 13:56 IST
ಬೀದರ್‌ನಲ್ಲಿ ನಡೆದ ಡಾ. ಚನ್ನಬಸವ ಪಟ್ಟದ್ದೇವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಡಾ. ಮಹೇಶ ಬಿರಾದಾರ ಅವರನ್ನು ಸನ್ಮಾನಿಸಲಾಯಿತು
ಬೀದರ್‌ನಲ್ಲಿ ನಡೆದ ಡಾ. ಚನ್ನಬಸವ ಪಟ್ಟದ್ದೇವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಡಾ. ಮಹೇಶ ಬಿರಾದಾರ ಅವರನ್ನು ಸನ್ಮಾನಿಸಲಾಯಿತು   

ಬೀದರ್: ರಾಣಿ ಕಿತ್ತೂರ ಚನ್ನಮ್ಮ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನಗರದ ವಿದ್ಯಾನಗರ ಕಾಲೊನಿಯ ಡಾ.ಚನ್ನಬಸವ ಪಟ್ಟದ್ದೇವರ ಪ್ರಸಾದ ನಿಲಯದಲ್ಲಿ ಡಾ.ಚನ್ನಬಸವ ಪಟ್ಟದ್ದೇವರ 130ನೇ ಜಯಂತ್ಯುತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ನಗರಸಭೆ ಮಾಜಿ ಸದಸ್ಯ ರಾಜಾರಾಮ ಚಿಟ್ಟಾ, ಕೃಷಿ ಉಪ ನಿರ್ದೇಶಕ ಸೋಮಶೇಖರ ಬಿರಾದಾರ ಹಾಗೂ ಪತ್ರಕರ್ತ ಶಶಿಕುಮಾರ ಪಾಟೀಲ ಸಂಗಮ ಜಂಟಿಯಾಗಿ ಡಾ. ಪಟ್ಟದ್ದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಡಾ. ಮಹೇಶ ಬಿರಾದಾರ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

ADVERTISEMENT

ಸಂಘದ ಶಿವಕುಮಾರ ಭಾಲ್ಕೆ, ಮಹಾರುದ್ರ ನೇಳಗೆ, ಸುರೇಶ ಹಳೆಂಬುರ, ಶಿವಶಂಕರ ಭುಜಂಗೆ, ಸತ್ಯನಾರಾಯಣ, ಮಹಾಂತೇಶ ಚಟ್ನಳ್ಳಿಕರ್, ಬಸವರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.