ADVERTISEMENT

ಕುರುಬರಿಗೆ ಜಿಲ್ಲೆಗೊಂದು ಟಿಕೆಟ್: ಸ್ವಾಮೀಜಿ ಮನವಿ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2023, 15:09 IST
Last Updated 22 ಫೆಬ್ರುವರಿ 2023, 15:09 IST
ಬೆಂಗಳೂರಿನಲ್ಲಿ ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠದ ಸಿದ್ಧರಾಮಾನಂದ ಸ್ವಾಮೀಜಿ ಅವರು ಕುರುಬ ಸಮುದಾಯಕ್ಕೆ ಜಿಲ್ಲೆಗೊಂದು ಟಿಕೆಟ್ ಕೊಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಬೆಂಗಳೂರಿನಲ್ಲಿ ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠದ ಸಿದ್ಧರಾಮಾನಂದ ಸ್ವಾಮೀಜಿ ಅವರು ಕುರುಬ ಸಮುದಾಯಕ್ಕೆ ಜಿಲ್ಲೆಗೊಂದು ಟಿಕೆಟ್ ಕೊಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಬೀದರ್: ಜಿಲ್ಲೆಗೊಬ್ಬರು ಕುರುಬ ಸಮುದಾಯದ ಪ್ರತಿನಿಧಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎಂದು ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠದ ಸಿದ್ಧರಾಮಾನಂದ ಸ್ವಾಮೀಜಿ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಈ ಕುರಿತು ಮನವಿ ಪತ್ರ ಸಲ್ಲಿಸಿದರು.
ರಾಜ್ಯದಲ್ಲಿ ಸಮುದಾಯಕ್ಕೆ ಕನಿಷ್ಠ 25 ಟಿಕೆಟ್ ನೀಡಬೇಕು. ಜಿಲ್ಲೆಗೊಂದು ಟಿಕೆಟ್ ಕೊಟ್ಟರೆ, ಆಯಾ ಜಿಲ್ಲೆಗಳ ಇತರ ಕ್ಷೇತ್ರಗಳ ಅಭ್ಯರ್ಥಿಗಳ ಗೆಲುವಿಗೂ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ಕಲಬುರಗಿ, ಬೀದರ್, ಯಾದಗಿರಿ ಹಾಲು ಒಕ್ಕೂಟದ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ ಹಾಗೂ ಇತರ ಮುಖಂಡರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.