ADVERTISEMENT

ವಕೀಲರ ಕಟ್ಟಡದ ಮಹಡಿ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2021, 4:15 IST
Last Updated 25 ಜೂನ್ 2021, 4:15 IST
ಬೀದರ್‌ನಲ್ಲಿ ವಕೀಲರ ಕಟ್ಟಡದ ಮೊದಲ, ಎರಡನೇ ಮಹಡಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವಾಣ್, ನ್ಯಾಯಾಧೀಶ ಕಾಡ್ಲೂರ್ ಸತ್ಯ ನಾರಾಯಣಾಚಾರ್ಯ, ಡಿ.ಎಲ್‌.ನಾಗೇಶ ಪಾಲ್ಗೊಂಡಿದ್ದರು
ಬೀದರ್‌ನಲ್ಲಿ ವಕೀಲರ ಕಟ್ಟಡದ ಮೊದಲ, ಎರಡನೇ ಮಹಡಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವಾಣ್, ನ್ಯಾಯಾಧೀಶ ಕಾಡ್ಲೂರ್ ಸತ್ಯ ನಾರಾಯಣಾಚಾರ್ಯ, ಡಿ.ಎಲ್‌.ನಾಗೇಶ ಪಾಲ್ಗೊಂಡಿದ್ದರು   

ಬೀದರ್‌: ಇಲ್ಲಿಯ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಿರ್ಮಿಸಲಾಗಿರುವ ವಕೀಲರ ಕಟ್ಟಡದ ಮೊದಲ, ಎರಡನೇ ಮಹಡಿ ಹಾಗೂ ನ್ಯಾಯಾಧೀಶರ ವಸತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮ ಗುರುವಾರ ನಡೆಯಿತು.

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ ಶ್ರೀನಿವಾಸ್ ಓಕ್ ಅವರು ವರ್ಚುವಲ್ (ಆನ್‌ಲೈನ್) ಮೂಲಕ ಉದ್ಘಾಟಿಸಿದರು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕಾಡ್ಲೂರ್ ಸತ್ಯ ನಾರಾಯಣಾಚಾರ್ಯ ಮಾತನಾಡಿ, ‘ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ನಿರಂತರ ಶ್ರಮಿಸುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯ ಶ್ಲಾಘನೀಯ’ ಎಂದರು.

ADVERTISEMENT

ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವಾಣ್, ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಗದೀಶ ಜಗತಾಪ, ಉಪಾಧ್ಯಕ್ಷ ಪ್ರಕಾಶ, ಕಾರ್ಯದರ್ಶಿ ಧನರಾಜ್ ಬಿರಾದಾರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್‌.ನಾಗೇಶ. ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್‌, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎನ್.ಲಿಂಗರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.