ಔರಾದ್: ಗ್ರಾಮೀಣ ಭಾಗದ ಕಾರ್ಮಿಕರು ಉದ್ಯೋಗ ಅರಸಿ ವಲಸೆ ಹೋಗದೇ ತಮ್ಮ ತಮ್ಮ ಊರುಗಳಲ್ಲೇ ಕೂಲಿ ಕೆಲಸ ಮಾಡಲು ಅವಕಾಶವಿದೆ ಎಂದು ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಹೇಳಿದರು.
ತಾಲ್ಲೂಕಿನ ವಡಗಾಂವ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಖಾನಾಪುರ ಅರಣ್ಯ ಪ್ರದೇಶದಲ್ಲಿ ಮಂಗಳವಾರ ನಡೆದ ಕಾಯಕ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಉದ್ಯೋಗ ಖಾತರಿ ಯೋಜನೆಯಡಿ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವೈಯಕ್ತಿಕ ಹಾಗೂ ಸಾಮೂಹಿಕ ಕೆಲಸಗಳಲ್ಲಿ ಭಾಗಿಯಾಗಲು ಅವಕಾಶವಿದೆ. ಈ ಯೋಜನೆಯಡಿ ನೋಂದಾಯಿತ ಕುಟುಂಬಕ್ಕೆ ವರ್ಷಕ್ಕೆ 100 ಮಾನವ ದಿನ ಕೆಲಸ ಮಾಡಲು ಅವಕಾಶವಿದ್ದು, ಕಾರ್ಮಿಕರು ಅದರ ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜಕುಮಾರ ಹೇಡೆ, ಅಭಿವೃದ್ಧಿ ಅಧಿಕಾರಿ ಅನೀಲಕುಮಾರ, ನರೇಗಾ ತಾಂತ್ರಿಕ ಸಂಯೋಜಕರು ಆನಂದ ಇದ್ದರು. ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.