ADVERTISEMENT

ಬೀದರ್: ರೈತ ವಿರೋಧಿ ಮಸೂದೆ ವಾಪಸ್‍ಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 16:58 IST
Last Updated 29 ಸೆಪ್ಟೆಂಬರ್ 2020, 16:58 IST
ರೈತ ಹಾಗೂ ಕಾರ್ಮಿಕ ವಿರೋಧಿ ಮಸೂದೆಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ವೇದಿಕೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್‍ನಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರಿಗೆ ಮನವಿ ಪತ್ರ ಸಲ್ಲಿಸಿದರು
ರೈತ ಹಾಗೂ ಕಾರ್ಮಿಕ ವಿರೋಧಿ ಮಸೂದೆಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ವೇದಿಕೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್‍ನಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಬೀದರ್: ರೈತ ಹಾಗೂ ಕಾರ್ಮಿಕ ವಿರೋಧಿ ಮಸೂದೆಗಳನ್ನು ಹಿಂಪಡೆಯಬೇಕು ಎಂದು ಕಲ್ಯಾಣ ಕರ್ನಾಟಕ ವೇದಿಕೆ ಒತ್ತಾಯಿಸಿದೆ.

ವೇದಿಕೆಯ ಪದಾಧಿಕಾರಿಗಳು ನಗರದಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರನ್ನು ಭೇಟಿ ಮಾಡಿ ಪ್ರಧಾನಿಗೆ ಬರೆದ ಮನವಿ ಪತ್ರವನ್ನು ಸಲ್ಲಿಸಿದರು.

ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ ವಾಲಿಕಾರ್, ಉಸ್ತುವಾರಿ ಬಸವರಾಜ ಧರಂಪುರ, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಓಂಪ್ರಕಾಶ ಜಿ.ಕೆ., ಮುಖಂಡರಾದ ಸಂತೋಷ ಬರೂರಕರ್, ಲೋಕೇಶ ಎಖ್ಖೆಳ್ಳಿಕರ್, ಆನಂದ ಶೇಕಾಪುರ, ನರಸಿಂಹಲು, ಬೋಯಿನ್, ಸುದೀಪ್ ಗುಣಗೊಂಡ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.