ADVERTISEMENT

ಕನ್ನಡ ಶಾಲೆ ಉಳಿಸಿ ಹೋರಾಟದ ಬೆಂಬಲಕ್ಕೆ ಸಂಘಟನೆಗಳ ಮೊರೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2025, 14:23 IST
Last Updated 17 ಜೂನ್ 2025, 14:23 IST
ಕನ್ನಡ ಸಂರಕ್ಷಣಾ ಸಮಿತಿ ಬೀದರ್ ಜಿಲ್ಲಾ ಘಟಕದ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಕಸಾಪ ಅಧ್ಯಕ್ಷ ಮಹೇಶ ಜೋಶಿ ಅವರಿಗೆ ಮನವಿ ಸಲ್ಲಿಸಿದರು
ಕನ್ನಡ ಸಂರಕ್ಷಣಾ ಸಮಿತಿ ಬೀದರ್ ಜಿಲ್ಲಾ ಘಟಕದ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಕಸಾಪ ಅಧ್ಯಕ್ಷ ಮಹೇಶ ಜೋಶಿ ಅವರಿಗೆ ಮನವಿ ಸಲ್ಲಿಸಿದರು   

ಬೀದರ್‌: ಕನ್ನಡ ಶಾಲೆಗಳನ್ನು ಉಳಿಸಲು ಕನ್ನಡ ಸಂರಕ್ಷಣಾ ಸಮಿತಿ ಬೀದರ್ ಜಿಲ್ಲಾ ಘಟಕವು ಹೋರಾಟ ಆರಂಭಿಸಿದೆ.

ಮೊದಲ ಹಂತದಲ್ಲಿ ಸಮಿತಿ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಮಹೇಶ ಜೋಶಿ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ನಾರಾಯಣಗೌಡ, ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣಶೆಟ್ಟಿ ಬಣದ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣಶೆಟ್ಟಿ, ನಮ್ಮ ಕರ್ನಾಟಕ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಬಸವರಾಜ ಅವರನ್ನು ಭೇಟಿ ಮಾಡಿದರು.

ಗಡಿ ಜಿಲ್ಲೆ ಬೀದರ್ ಸೇರಿದಂತೆ ರಾಜ್ಯದಲ್ಲಿ ಕನ್ನಡ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ರಾಜ್ಯ ಸರ್ಕಾರದ ಕಠಿಣ ನಿಯಮಗಳಿಂದ ರಾಜ್ಯದಲ್ಲಿ ಕಳೆದ 10 ವರ್ಷಗಳ ಅವಧಿಯಲ್ಲಿ ಸಾವಿರಾರು ಕನ್ನಡ ಶಾಲೆಗಳು ಮುಚ್ಚಿವೆ. ರಾಜ್ಯ ಸರ್ಕಾರವೇ ಕರ್ನಾಟಕ ಪಬ್ಲಿಕ್ ಸ್ಕೂಲ್ ಹೆಸರಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ಆಂಗ್ಲ ಮಾಧ್ಯಮ ಶಾಲೆಗಳನ್ನಾಗಿ ಬದಲಿಸುತ್ತಿದೆ. ಇದರ ವಿರುದ್ಧ ಹೋರಾಟ ನಡೆಸುವ ಅಗತ್ಯವಿದೆ ಎಂದು ಗಮನ ಸೆಳೆದರು.

ADVERTISEMENT

ಸಮಿತಿ ಜಿಲ್ಲಾ ಘಟಕದ ಸಂಚಾಲಕ ರೇವಣಸಿದ್ದಪ್ಪ ಜಲಾದೆ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಕನ್ನಡ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಸೋಮನಾಥ ಮುದ್ದಾ, ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ ಜಿಲ್ಲಾ ಅಧ್ಯಕ್ಷ ರಾಜೇಂದ್ರ ಮಣಗೇರಿ, ಕಾರ್ಯದರ್ಶಿ ಗುರುನಾಥ ರೆಡ್ಡಿ,  ಗುರುನಾಥ ದೇಶಮುಖ, ಸೈಯದ್ ಅಹಮ್ಮದ್, ಮಾಣಿಕಪ್ಪ ಗೋರನಾಳೆ, ರಮೇಶ ಧಬಾಲೆ, ಸಂತೋಷ್ ಕೃಷ್ಣಮೂರ್ತಿ, ಸಂಜುಕುಮಾರ ಬಿರಾದಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.