ADVERTISEMENT

ಅಮೃತ ಮಹೋತ್ಸವ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2022, 14:27 IST
Last Updated 8 ಆಗಸ್ಟ್ 2022, 14:27 IST
ಮಹೇಶ ಗೋರನಾಳಕರ್
ಮಹೇಶ ಗೋರನಾಳಕರ್   

ಬೀದರ್: ಆಗಸ್ಟ್ 15 ರಂದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭವನ್ನು ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಬೇಕು ಎಂದು ಬುದ್ಧ ಬೆಳಕು ಟ್ರಸ್ಟ್ ಅಧ್ಯಕ್ಷ ಮಹೇಶ ಗೋರನಾಳಕರ್ ಒತ್ತಾಯಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿರುವ ಅವರು, ಪೊಲೀಸ್ ಕವಾಯತು ಮೈದಾನದಲ್ಲಿ ಕಾರ್ಯಕ್ರಮ ಏರ್ಪಡಿಸಿದರೆ ಮಕ್ಕಳು, ಪಾಲಕರು, ವೃದ್ಧರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದು ಎಂದು ಹೇಳಿದ್ದಾರೆ.
ನೆಹರೂ ಕ್ರೀಡಾಂಗಣ ನಗರದ ಎಲ್ಲ ಕಡೆಯಿಂದ ಬರುವವರಿಗೆ ಅನುಕೂಲಕರವಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮ, ಕರಾಟೆ, ಏರ್ ಶೋ ವೀಕ್ಷಣೆಗೆ ಉತ್ತಮ ಸ್ಥಳವಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT