ADVERTISEMENT

ಅಮೃತ ಮಹೋತ್ಸವ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಿ

ಪೂರ್ವ ಸಿದ್ಧತಾ ಸಭೆಯಲ್ಲಿ ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ಸೂಚನೆ

​ಪ್ರಜಾವಾಣಿ ವಾರ್ತೆ
Published 14 ಮೇ 2022, 14:13 IST
Last Updated 14 ಮೇ 2022, 14:13 IST
ಬೀದರ್‍ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಬೀದರ್ ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ಮಾತನಾಡಿದರು
ಬೀದರ್‍ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಬೀದರ್ ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ಮಾತನಾಡಿದರು   

ಬೀದರ್: ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ಸೂಚಿಸಿದರು.


ನಗರದ ಜಿಲಾಧಿಕಾರಿ ಕಚೇರಿಯ ವಿಡಿಯೊ ಸಂವಾದ ಸಭಾಂಗಣದಲ್ಲಿ ‘ಅಮೃತ ಭಾರತಿಗೆ ಕನ್ನಡದ ಆರತಿ’ ಘೋಷವಾಕ್ಯದಡಿ ಜಿಲ್ಲೆಯಲ್ಲಿ ನಡೆಯಲಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮಗಳ ಪೂರ್ವ ಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.


ಜಿಲ್ಲಾ, ತಾಲ್ಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಹಾಗೂ ಹುಲಸೂರು ತಾಲ್ಲೂಕಿನ ಗೋರ್ಟಾದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.

ADVERTISEMENT


ಕಾರ್ಯಕ್ರಮದ ಅಂಗವಾಗಿ ವಿಶೇಷ ಉಪನ್ಯಾಸ, ಸಾಂಸ್ಕøತಿಕ ಕಾರ್ಯಕ್ರಮ, ಮೆರವಣಿಗೆ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯ ಕಲಾವಿದರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದರು.


ರಾಜ್ಯದಾದ್ಯಂತ ನಾಲ್ಕು ಹಂತಗಳಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸಾರ್ವಜನಿಕರಿಗೆ ತಿಳಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.


ಮೇ 28 ರಂದು ವೀರ ಸಾವರ್ಕರ್ ಜನ್ಮದಿನದ ಪ್ರಯುಕ್ತ ರಾಜ್ಯದ ವಿವಿಧ ಜಿಲ್ಲೆಗಳ 75 ಸ್ಥಳಗಳಲ್ಲಿ ಏಕಕಾಲಕ್ಕೆ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.


ಹುಲಸೂರು ತಹಶೀಲ್ದಾರ್ ಶಿವಾನಂದ ಮೇತ್ರೆ, ಭಾಲ್ಕಿ ತಹಶೀಲ್ದಾರ್ ಕೀರ್ತಿ ಚಾಲಕ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಚಲನಚಿತ್ರ ನಟ, ವೈಜಿನಾಥ ಬಿರಾದಾರ, ಸರ್ದಾರ್ ವಲ್ಲಭಭಾಯಿ ಪ್ರತಿಷ್ಠಾನದ ಅಧ್ಯಕ್ಷ ಶಿವಶರಣಪ್ಪ ವಾಲಿ, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ, ಕನ್ನಡಾಂಬೆ ಗೆಳೆಯರ ಬಗಳದ ಅಧ್ಯಕ್ಷ ವಿರೂಪಾಕ್ಷ ಗಾದಗಿ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.