ಬೀದರ್: ಕರ್ನಾಟಕ ರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ನಗರಸಭೆಯು ನಗರದಲ್ಲಿ ಕನ್ನಡೇತರ ನಾಮಫಲಕಗಳನ್ನು ಅಳವಡಿಸಿರುವ ಮಳಿಗೆಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದೆ.
ಮಂಗಳವಾರ ನಗರದ ಓಲ್ಡ್ ಸಿಟಿಯ ಚೌಬಾರ ರಸ್ತೆಯಲ್ಲಿ ಮಳಿಗೆಗಳ ಮೇಲೆ ಅಳವಡಿಸಿದ್ದ ಆಂಗ್ಲ ಹಾಗೂ ಇತರೆ ಭಾಷೆಯ ನಾಮಫಲಕಗಳನ್ನು ನಗರಸಭೆಯ ಸಿಬ್ಬಂದಿ ತೆರವುಗೊಳಿಸಿದರು. ಕೆಲವರು ಅದಕ್ಕೆ ವಿರೋಧ ವ್ಯಕ್ತಪಡಿಸಿದರು. ಆದರೆ, ಅದನ್ನು ಲೆಕ್ಕಿಸದೆ ಕಾರ್ಯಾಚರಣೆ ಕೈಗೊಂಡರು.
ಸೋಮವಾರ ನಗರದ ಮೋಹನ್ ಮಾರ್ಕೆಟ್ ಪ್ರದೇಶದಲ್ಲಿ ನಾಮಫಲಕಗಳನ್ನು ತೆರವುಗೊಳಿಸಲಾಗಿತ್ತು. ಮಳಿಗೆಗಳ ಮೇಲೆ ಕನ್ನಡ ನಾಮಫಲಕಗಳನ್ನು ಅಳವಡಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ನಗರಸಭೆಯಿಂದ ಮಳಿಗೆಗಳ ಮಾಲೀಕರಿಗೆ ನೋಟಿಸ್ ನೀಡಲಾಗಿತ್ತು. ನೋಟಿಸ್ ನೀಡಿದರೂ ನಾಮಫಲಕಗಳ ಮೇಲೆ ಕನ್ನಡದಲ್ಲಿ ಬರೆಸದ ಕಾರಣ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ನಗರಸಭೆಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.