ADVERTISEMENT

‘ಮೊಟ್ಟೆ ವಿತರಣೆಗೆ ವಿರೋಧ ಸಲ್ಲ’

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2021, 12:30 IST
Last Updated 3 ಡಿಸೆಂಬರ್ 2021, 12:30 IST
ಅಹ್ಮದ್ ಜಮಗಿ
ಅಹ್ಮದ್ ಜಮಗಿ   

ಔರಾದ್: ‘ಪ್ರಾಥಮಿಕ ಶಾಲೆ ಮಕ್ಕಳಿಗೆ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ’ ಎಂದು ಕಿಸಾನ್ ಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಅಹ್ಮದ್ ಜಮಗಿ ತಿಳಿಸಿದ್ದಾರೆ.

‘ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಸಮೀಕ್ಷೆಯಿಂದ ಗೊತ್ತಾಗಿದೆ. ಈ ಕಾರಣ ಸರ್ಕಾರ ಡಿಸೆಂಬರ್ 1ರಿಂದ ಮಕ್ಕಳಿಗೆ ಮೊಟ್ಟೆ ವಿತರಿಸಲು ಶುರು ಮಾಡಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆ ಹಣ್ಣು ಕೊಡುವ ವ್ಯವಸ್ಥೆ ಇದೆ. ಆದರೆ ಕೆಲವರು ಇದನ್ನು ವಿರೋಧಿಸಿ ಬಡ ಮಕ್ಕಳ ಹೊಟ್ಟೆ ಮೇಲೆ ಹೊಡೆಯಲು ಹೊರಟಿದ್ದು ಸರಿಯಲ್ಲ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT