ADVERTISEMENT

ಆಮ್ಲಜನಕ ಸಾಂದ್ರಕ ಯಂತ್ರ ದೇಣಿಗೆ

ಸೋಂಕಿತರ ನೆರವಿಗಾಗಿ ರೋಟರಿ ಕ್ಲಬ್‌ ವತಿಯಿಂದ ಬ್ರಿಮ್ಸ್ ಆಸ್ಪತ್ರೆಗೆ ಉಪಕರಣ

​ಪ್ರಜಾವಾಣಿ ವಾರ್ತೆ
Published 11 ಮೇ 2021, 7:51 IST
Last Updated 11 ಮೇ 2021, 7:51 IST
ಬೀದರ್‌ನಲ್ಲಿ ಸೋಮವಾರ ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯ ಪದಾಧಿಕಾರಿಗಳು ಬ್ರಿಮ್ಸ್ ಆಸ್ಪತ್ರೆಗೆ ದೇಣಿಗೆ ರೂಪದಲ್ಲಿ ನೀಡಿದ ಆಮ್ಲಜನಕ ಸಾಂದ್ರಕ ಯಂತ್ರಗಳನ್ನು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಹಸ್ತಾಂತರಿಸಿದರು
ಬೀದರ್‌ನಲ್ಲಿ ಸೋಮವಾರ ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯ ಪದಾಧಿಕಾರಿಗಳು ಬ್ರಿಮ್ಸ್ ಆಸ್ಪತ್ರೆಗೆ ದೇಣಿಗೆ ರೂಪದಲ್ಲಿ ನೀಡಿದ ಆಮ್ಲಜನಕ ಸಾಂದ್ರಕ ಯಂತ್ರಗಳನ್ನು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಹಸ್ತಾಂತರಿಸಿದರು   

ಬೀದರ್: ಕೊರೊನಾ ಸೋಂಕಿತರ ಚಿಕಿತ್ಸೆಗೆ ನೆರವಾಗಲು ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯು ಇಲ್ಲಿಯ ಬ್ರಿಮ್ಸ್ ಆಸ್ಪತ್ರೆಗೆ ಮೂರು ಆಮ್ಲಜನಕ ಸಾಂದ್ರಕ ಯಂತ್ರ (ಆಕ್ಸಿಜನ್ ಕಾನ್ಸೆಂಟ್ರೇಟರ್ ಮಷಿನ್‌) ಗಳನ್ನು ದೇಣಿಗೆ ರೂಪದಲ್ಲಿ ನೀಡಿದೆ.

ಕ್ಲಬ್ ಪದಾಧಿಕಾರಿಗಳು ಬ್ರಿಮ್ಸ್ ಆಸ್ಪತ್ರೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಯಂತ್ರಗಳನ್ನು ಹಸ್ತಾಂತರಿಸಿದರು.

‘ಸೋಂಕಿತರ ಆಮ್ಲಜನಕ ಮಟ್ಟ ತಪಾಸಣೆ ಮಾಡಲು ಬ್ರಿಮ್ಸ್‌ಗೆ ಈಗಾಗಲೇ 24 ಆಕ್ಸಿಮೀಟರ್‌ಗಳನ್ನು ಕೊಡುಗೆಯಾಗಿ ನೀಡಲಾಗಿದೆ. ಇದೀಗ ಆಮ್ಲಜನಕ ಕೊರತೆ ನೀಗಿಸುವ ದಿಸೆಯಲ್ಲಿ ಆಮ್ಲಜನಕ ಸಾಂದ್ರಕ ಯಂತ್ರಗಳನ್ನು ದೇಣಿಗೆ ಕೊಡಲಾಗಿದೆ’ ಎಂದು ಕ್ಲಬ್ ಅಧ್ಯಕ್ಷ ಸೂರ್ಯಕಾಂತ ರಾಮಶೆಟ್ಟಿ ತಿಳಿಸಿದರು.

ADVERTISEMENT

‘ಈ ಯಂತ್ರಗಳು ವಾತಾವರಣ ದಲ್ಲಿನ ಗಾಳಿ ಹೀರಿಕೊಂಡು, ಶುದ್ಧೀಕರಿಸಿ, ಆಮ್ಲಜನಕ ಒದಗಿಸುತ್ತವೆ’ ಎಂದು ಹೇಳಿದರು.

‘ಕೊರೊನಾ ಸೋಂಕಿತರ ಚಿಕಿತ್ಸೆಗೆ ಅನುಕೂಲ ಮಾಡಿಕೊಡಲು ಬರುವ ದಿನಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಇನ್ನೂ ಕೆಲ ಉಪಕರಣಗಳನ್ನು ದೇಣಿಗೆ ಕೊಡುವ ಉದ್ದೇಶ ಇದೆ. ಸಂಘ– ಸಂಸ್ಥೆಗಳು ಹಾಗೂ ದಾನಿಗಳು ಸೋಂಕಿತರ ಚಿಕಿತ್ಸೆಗೆ ನೆರವಾಗಲು ಮುಂದೆ ಬರಬೇಕು’ ಎಂದು ಮನವಿ ಮಾಡಿದರು.

ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭುವನೇಶ ಪಾಟೀಲ, ಬ್ರಿಮ್ಸ್ ನಿರ್ದೇಶಕ ಡಾ. ಶಿವಕುಮಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಜಿ. ರೆಡ್ಡಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ರತಿಕಾಂತ ಸ್ವಾಮಿ, ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯ ಉಪಾಧ್ಯಕ್ಷ ನಿತಿನ್ ಕರ್ಪೂರ, ಕಾರ್ಯದರ್ಶಿ ಡಾ. ಕಪಿಲ್ ಪಾಟೀಲ, ಖಜಾಂಚಿ ಡಾ. ರಿತೇಶ ಸುಲೆಗಾಂವ, ಡಾ. ವಿವೇಕ ನಿಂಬೂರ, ಡಾ. ಸಂಗಮೇಶ ಕುಣಕೇರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.