ಬೀದರ್: ಆಷಾಢ ಪ್ರಯುಕ್ತ ನಗರದಲ್ಲಿ ಸೋಮವಾರ ಪಾಂಡುರಂಗನ ಪಲ್ಲಕ್ಕಿ ಮೆರವಣಿಗೆ ನಡೆಯಿತು.
ಕೊರೊನಾ ಸೋಂಕಿನ ಕಾರಣ ಕೇವಲ ಪುರೋಹಿತರ ನೇತೃತ್ವದಲ್ಲಿ ಮೆರವಣಿಗೆ ನಡೆಸಲಾಯಿತು. ಪಾಂಡುರಂಗ ದೇವರ ಪಾದುಕೆಗೆ ಪೂಜೆ ಹಾಗೂ ದಹಿ ಹಂಡಿ ಒಡೆಯುವ ಕಾರ್ಯಕ್ರಮಗಳು ನಡೆದವು. ಕೊರೊನಾ ಮುಕ್ತಿಗಾಗಿ ದೇವರಲ್ಲಿ ಪ್ರಾರ್ಥಿಸಲಾಯಿತು.
ಚೌಬಾರಾ ಹತ್ತಿರ ಇರುವ ಐತಿಹಾಸಿಕ ಪಾಂಡುರಂಗ ದೇವಸ್ಥಾನದಲ್ಲಿ ಭಜನೆ ಕಾರ್ಯಕ್ರಮ ನಡೆಯಿತು.
ಮಂದಿರದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಗಾದಾ ಮೊದಲಾದವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.