ADVERTISEMENT

ಹುತಾತ್ಮ ಸ್ಮಾರಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ: ಚಂದ್ರಶೇಖರ ಪಾಟೀಲ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 14:04 IST
Last Updated 25 ಮಾರ್ಚ್ 2023, 14:04 IST
ಚಂದ್ರಶೇಖರ ಪಾಟೀಲ ಶೇಕಾಪುರ
ಚಂದ್ರಶೇಖರ ಪಾಟೀಲ ಶೇಕಾಪುರ   

ಬೀದರ್: ಜಿಲ್ಲೆಯ ಗೋರಟಾ(ಬಿ)ದಲ್ಲಿ ಮಾ. 26 ರಂದು ನಡೆಯಲಿರುವ ಹುತಾತ್ಮರ ಸ್ಮಾರಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಯುವ ಮೋರ್ಚಾ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ ಶೇಕಾಪುರ ಮನವಿ ಮಾಡಿದ್ದಾರೆ.

ಹುತಾತ್ಮರ ಸ್ವಾತಂತ್ರ್ಯ ಹೋರಾಟ, ತ್ಯಾಗ ಹಾಗೂ ಬಲಿದಾನವನ್ನು ಜಗತ್ತಿಗೆ ಪರಿಚಯಿಸುವ ದಿಸೆಯಲ್ಲಿ ಗ್ರಾಮದಲ್ಲಿ ಹುತಾತ್ಮರ ಸ್ಮಾರಕ ನಿರ್ಮಾಣವಾಗಬೇಕು ಎನ್ನುವ ಗೋರಟಾ (ಬಿ) ಗ್ರಾಮಸ್ಥರ ಹಾಗೂ ಜಿಲ್ಲೆಯ ಜನರ ಬಹುದಿನಗಳ ಆಕಾಂಕ್ಷೆ ಯುವ ಮೋರ್ಚಾ ಮುಂದಾಳತ್ವದಲ್ಲಿ ಕೊನೆಗೂ ಈಡೇರಿದೆ ಎಂದು ತಿಳಿಸಿದ್ದಾರೆ.

ಯುವ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ತುಳಸಿ ಮುನಿರಾಜು ಗೌಡ ಅವರ ನೇತೃತ್ವದಲ್ಲಿ ಹುತಾತ್ಮ ಸ್ಮಾರಕ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. 2014 ರ ಸೆ. 17 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ ಹುತಾತ್ಮ ಸ್ಮಾರಕಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು. ಇದೀಗ ಕೇಂದ್ರ ಗೃಹ ಸಚಿವರಾಗಿರುವ ಅವರೇ ಭಾನುವಾರ ಸ್ಮಾರಕದ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಹೇಳಿದ್ದಾರೆ.

ADVERTISEMENT

ಸ್ಮಾರಕ ನಿರ್ಮಾಣಕ್ಕೆ ಯುವ ಮೋರ್ಚಾದಿಂದ ದೇಣಿಗೆ ಸಂಗ್ರಹಿಸಲಾಗಿತ್ತು. ಯುವ ಮೋರ್ಚಾ ಕಾರ್ಯಕರ್ತರು ಶ್ರಮದಾನವನ್ನೂ ಮಾಡಿದ್ದರು. ಅವರ ಶ್ರಮ ಸಾರ್ಥಕವಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.