ಔರಾದ್ ತಾಲ್ಲೂಕಿನ ಜಮಾಲಪುರ ಬಳಿ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಗಿ ಬಿದ್ದಿದೆ
ಔರಾದ್ (ಬೀದರ್ ಜಿಲ್ಲೆ): ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಔರಾದ್ ಘಟಕದ ಬಸ್ ಬುಧವಾರ ಬೆಳಿಗ್ಗೆ ಇಲ್ಲಿಗೆ ಸಮೀಪದ ಜಮಾಲಪುರ ಬಳಿ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಖಂಡಿಕೇರಿ ಗ್ರಾಮದ ಸೋಪಾನರಾವ ಬಿರಾದಾರ, ಬಾಲಕ ನರಸಿಂಗ ಬಿರಾದಾರ ಎಂಬುವರನ್ನು ಔರಾದ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಸ್‌ನಲ್ಲಿದ್ದ ಇತರೆ ಏಳು ಪ್ರಯಾಣಿಕರ ಸುರಕ್ಷಿತವಾಗಿದ್ದಾರೆ ಎಂದು ಘಟಕ ವ್ಯವಸ್ಥಾಪಕ ರಾಜೇಂದ್ರ ಪ್ರಜಾವಾಣಿಗೆ ತಿಳಿಸಿದ್ದಾರೆ.
ಔರಾದ್‌ನಿಂದ ಮುಧೋಳ ಮಾರ್ಗವಾಗಿ ಭಾಲ್ಕಿ ಕಡೆ ಹೋಗುತ್ತಿದ್ದ ಬಸ್ ಜಮಾಲಪುರ ಬಳಿ ಎದುರಿನಿಂದ ಬರುತ್ತಿದ್ದ ಟೆಂಪೋಗೆ ದಾರಿ ಕೊಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳಕ್ಕೆ ಘಟಕ ವ್ಯವಸ್ಥಾಪಕರು ಹಾಗೂ ಪೊಲೀಸರು ಭೇಟಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.