ಬೀದರ್: ಭಾರತ ಮಾತೆಯ ಸೇವೆಗೆ ಯುವಕರು ಸೇನೆಗೆ ಸೇರಬೇಕು ಎಂದು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಹೇಳಿದರು.
ಸಂಘದ ಪ್ರಾಯೋಜಕತ್ವದಲ್ಲಿ ಇಲ್ಲಿಯ ಗ್ಲೋಬಲ್ ಸೈನಿಕ ಅಕಾಡೆಮಿಯಲ್ಲಿ ನಡೆಯುತ್ತಿರುವ ಸೇನಾ ಪೂರ್ವ ತರಬೇತಿ ಶಿಬಿರಕ್ಕೆ ಭೇಟಿ ನೀಡಿದ ಅವರು, ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಯುವಕರು ಪ್ರಾಮಾಣಿಕತೆ ರೂಢಿಸಿಕೊಳ್ಳಬೇಕು. ಉತ್ತಮ ವ್ಯಕ್ತಿಗಳಾಗಲು ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದರು.
ಸಶಸ್ತ್ರ ಪಡೆ ಹಾಗೂ ಅರೆ ಸೇನಾ ಪಡೆಗಳ ಆಕಾಂಕ್ಷಿಗಳೊಂದಿಗೆ ಸಂವಾದವನ್ನೂ ನಡೆಸಿದರು. ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ, ಗ್ಲೊಬಲ್ ಸೈನಿಕ ಅಕಾಡೆಮಿಯ ಅಧ್ಯಕ್ಷ ನಿವೃತ್ತ ಕರ್ನಲ್ ಶರಣಪ್ಪ ಸಿಕೇನಪುರೆ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.