ADVERTISEMENT

ಬೀದರ್ ಜಿಲ್ಲಾ ಪಂಚಾಯಿತಿ ಸಿಇಒ ಮೇಲೆ ಪಿಡಿಓ ಇಂದಲೇ ಹಲ್ಲೆ ಯತ್ನ!

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2021, 19:54 IST
Last Updated 27 ಅಕ್ಟೋಬರ್ 2021, 19:54 IST
ಸಿಇಒ ಜಹೀರಾ ನಸೀಮ್‌
ಸಿಇಒ ಜಹೀರಾ ನಸೀಮ್‌    

ಬೀದರ್: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಸಭೆ ನಡೆಸುತ್ತಿದ್ದ ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್‌ ಮೇಲೆ ಪಿಡಿಒ ಮಂಗಲಾ ಮಂಗಳವಾರ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.

‘ಮಂಗಳವಾರ ಸಂಜೆ 4ಕ್ಕೆ ಅಧಿಕಾರಿಗಳ ಸಭೆ ನಡೆಸುತ್ತಿದ್ದಾಗ ಪೊಲೀಸ್‌ ಕಾನ್‌ಸ್ಟೆಬಲ್‌ಗಳ ಕಣ್ಣು ತಪ್ಪಿಸಿ ಒಳಗೆ ಬಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಗಲಾ ಕಾಂಬಳೆ, ನನ್ನ ಮೇಲೆ ಹಠಾತ್‌ ಹಲ್ಲೆ ಮಾಡಲು ಯತ್ನಿಸಿದರು. ಈ ಸಂದರ್ಭದಲ್ಲಿ ನನ್ನ ಕೈಬೆರಳಿಗೆ ಸ್ವಲ್ಪ ಗಾಯವಾಗಿದೆ’ ಎಂದು ಸಿಇಒ ಜಹೀರಾ ನಸೀಮ್‌ ಪೊಲೀಸರಿಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT