ADVERTISEMENT

ಪಿಡಿಒ ನಿಗೂಢ ಸಾವು: ತನಿಖೆಗೆ ಒತ್ತಾಯ

ರಾಜ್ಯ ಸರ್ಕಾರಿ ನೌಕರರ ಸಂಘ, ಪಿಡಿಒಗಳ ಸಂಘದ ಮನವಿ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 11:34 IST
Last Updated 7 ಡಿಸೆಂಬರ್ 2021, 11:34 IST
ಔರಾದ್‌ ತಾಲ್ಲೂಕಿನ ಜಮಗಿ ಗ್ರಾಮ ಪಂಚಾಯಿತಿ ಪ್ರಭಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಮೇಶ ಲೋಹಾರ ಸಾವಿನ ಕುರಿತು ತನಿಖೆ ನಡೆಸಬೇಕು ಎಂದು ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು
ಔರಾದ್‌ ತಾಲ್ಲೂಕಿನ ಜಮಗಿ ಗ್ರಾಮ ಪಂಚಾಯಿತಿ ಪ್ರಭಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಮೇಶ ಲೋಹಾರ ಸಾವಿನ ಕುರಿತು ತನಿಖೆ ನಡೆಸಬೇಕು ಎಂದು ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು   

ಔರಾದ್: ‘ತಾಲ್ಲೂಕಿನ ಜಮಗಿ ಗ್ರಾಮ ಪಂಚಾಯಿತಿ ಪ್ರಭಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಮೇಶ ಲೋಹಾರ (32) ಅವರು ಸಾವನ್ನಪ್ಪಿದ್ದು, ತೆಲಂಗಾಣ ರಾಜ್ಯದ ರಾಯಕೋಡ್ ಸಮೀಪದ ಸೇತುವೆ ಬಳಿ ಅವರ ಶವ ಪತ್ತೆಯಾಗಿದೆ. ತನಿಖೆ ನಡೆಸಬೇಕು’ ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಪ್ರಮುಖರು ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ ಅವರಿಗೆ ಮನವಿ ಸಲ್ಲಿಸಿದರು.

‘ಬೀದರ್‌ನಲ್ಲಿ ವಾಸವಾಗಿದ್ದ ರಮೇಶ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈ ಕುರಿತು ಅವರ ಪತ್ನಿ ಬೀದರ್‌ನ ಗಾಂಧಿ ಗಂಜ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು’ ಎಂದು ಮನವಿಯಲ್ಲಿ ತಿಳಿಸಲಾಗಿದೆ.

‘ಪಿಡಿಒ, ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದು, ನಂತರ ಅವರ ಶವ ಪಕ್ಕದ ತೆಲಂಗಾಣ ರಾಜ್ಯದಲ್ಲಿ ದೊರಕಿದೆ. ವಿವಿಧ ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಇದೊಂದು ನಿಗೂಢ ಸಾವು. ತನಿಖೆ ನಡೆಸಬೇಕಾದ ಅಗತ್ಯವಿದೆ’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಕುಮಾರ ಘಾಟೆ ಹೇಳಿದರು.

ADVERTISEMENT

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ, ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಸುನೀಲಕುಮಾರ ಕಸ್ತೂರೆ, ಸಹ ಕಾರ್ಯದರ್ಶಿ ಸಂಗಮೇಶ ಕೊಡ್ಲೆ, ಪಿಡಿಒಗಳ ಸಂಘದ ಅಧ್ಯಕ್ಷ ನಾಗೇಶ ಮುಕ್ರಂಬೆ ಹಾಗೂ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.