ADVERTISEMENT

250 ಕ್ವಿಂಟಲ್ ಅಕ್ಕಿ ಜಪ್ತಿ

​ಪ್ರಜಾವಾಣಿ ವಾರ್ತೆ
Published 20 ಜೂನ್ 2020, 9:13 IST
Last Updated 20 ಜೂನ್ 2020, 9:13 IST

ಬಸವಕಲ್ಯಾಣ: ಅನ್ನಭಾಗ್ಯ ಯೋಜನೆಯ 250 ಕ್ವಿಂಟಲ್ ಅಕ್ಕಿ ಅಕ್ರಮವಾಗಿ ಅನ್ಯ ರಾಜ್ಯಕ್ಕೆ ಸಾಗಿಸುತ್ತಿದ್ದಾಗ ಇಲ್ಲಿನ ಆಹಾರ ಇಲಾಖೆ ಅಧಿಕಾರಿಗಳು ಗುರುವಾರ ಜಪ್ತಿ ಮಾಡಿಕೊಂಡಿದ್ದಾರೆ.

ಹುಮನಾಬಾದ್ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಲಾರಿಯಲ್ಲಿ ಅಕ್ಕಿ ಸಾಗಿಸುತ್ತಿದ್ದಾಗ ಸಸ್ತಾಪುರ ಬಂಗ್ಲಾ ಹತ್ತಿರದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಅಕ್ಕಿ ಹಾಗೂ ಲಾರಿಯನ್ನು ಜಪ್ತಿ ಮಾಡಿಕೊಂಡು ಚಾಲಕ ಅವಿನಾಶ ಧೂಳೆ ಎನ್ನುವವನನ್ನು ಬಂಧಿಸಿದ್ದಾರೆ. ಅಕ್ಕಿಯು ರೂ 750,000 ಮೌಲ್ಯದ್ದಾಗಿದ್ದು ಯಾದಗಿರಿಯಿಂದ ಮುಂಬೈಗೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಈ ಬಗ್ಗೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT