
ಪ್ರಜಾವಾಣಿ ವಾರ್ತೆ
ಭಾಲ್ಕಿ: ‘ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖ ಅಂಶವಾಗಿದ್ದ ಹಳೆ ಪಿಂಚಣಿ ಯೋಜನೆಯನ್ನು ಶೀಘ್ರದಲ್ಲಿಯೇ ಜಾರಿ ಮಾಡಿ ಸರ್ಕಾರಿ ನೌಕರರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ರಾಜ್ಯ ಸರ್ಕಾರಿ (ಎನ್.ಪಿ.ಎಸ್) ನೌಕರರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ತಳವಾಡೆ ಒತ್ತಾಯಿಸಿದ್ದಾರೆ.
2006 ಏಪ್ರಿಲ್ 1 ರ ನಂತರ ನೇಮಕಗೊಂಡ ರಾಜ್ಯ ಸರ್ಕಾರಿ ನೌಕರರ ಸಂಧ್ಯಾಕಾಲದ ಸ್ವಾವಲಂಬಿ, ಗೌರವಯುತ ಬದುಕಿಗೆ ಮಾರಕವಾಗಿರುವ ಹೊಸ ಪಿಂಚಣಿ ಯೋಜನೆ ರದ್ದು ಮಾಡಬೇಕು. ರಾಜಸ್ಥಾನ, ಛತ್ತೀಸಗಢ, ಪಂಜಾಬ್, ಜಾರ್ಖಂಡ್, ಹಿಮಾಚಲ ಪ್ರದೇಶ ಮಾದರಿಯಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಿ ಲಕ್ಷಾಂತರ ನೌಕರರ ಬದುಕಿಗೆ ಬೆಳಕು ನೀಡಬೇಕು’ ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.