ADVERTISEMENT

ಸಂಕ್ಷಿಪ್ತ ಸುದ್ದಿ

​ಪ್ರಜಾವಾಣಿ ವಾರ್ತೆ
Published 7 ಜೂನ್ 2021, 16:06 IST
Last Updated 7 ಜೂನ್ 2021, 16:06 IST

ಮಾಸ್ಕ್ ಧರಿಸದ 1,177 ಮಂದಿಗೆ ದಂಡ

ಬೀದರ್: ಜಿಲ್ಲೆಯಲ್ಲಿ ಸೋಮವಾರ ಮಾಸ್ಕ್ ಧರಿಸದ 1,177 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ₹ 1,17,700 ದಂಡ ವಿಧಿಸಿದ್ದಾರೆ. ಅನಾವಶ್ಯಕವಾಗಿ ಸಂಚರಿಸಿದವರ 142 ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ತಿಳಿಸಿದ್ದಾರೆ.

* * *
ಫಲಾನುಭವಿಗಳ ಸಾಲ ಮನ್ನಾಕ್ಕೆ ಆಗ್ರಹ

ADVERTISEMENT

ಬೀದರ್: ಕೋವಿಡ್ ಕಾರಣ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳು ಸ್ವಯಂ ಉದ್ಯೋಗ ಯೋಜನೆಯಡಿ ಬ್ಯಾಂಕ್‍ಗಳಿಂದ ಪಡೆದ ರೂ. 5 ಲಕ್ಷದವರೆಗಿನ ಸಾಲ ಮನ್ನಾ ಮಾಡಬೇಕು ಎಂದು ಜೆಡಿಎಸ್ ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಭಿ ಕಾಳೆ ಆಗ್ರಹಿಸಿದ್ದಾರೆ.

ಫಲಾನುಭವಿಗಳು ಸಾಲ ಪಡೆದು ಉದ್ಯೋಗ ಆರಂಭಿಸುವಷ್ಟರಲ್ಲಿ ಕೋವಿಡ್ ಕಾಣಿಸಿಕೊಂಡಿತು. ಹೀಗಾಗಿ ಫಲಾನುಭವಿಗಳು ಸಮಸ್ಯೆ ಎದುರಿಸಬೇಕಾಯಿತು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಬ್ಯಾಂಕ್‍ನವರು ಮಾಸಿಕ ಕಂತು ಪಾವತಿಸುವಂತೆ ಕಿರುಕುಳ ಕೊಡುತ್ತಿದ್ದಾರೆ. ಸದ್ಯ ಜನರಿಗೆ ಕೆಲಸ ಇಲ್ಲ. ಊಟಕ್ಕೂ ಗತಿ ಇಲ್ಲ. ಇಂಥ ಪರಿಸ್ಥಿತಿಯಲ್ಲಿ ಬಡ್ಡಿ ಸಮೇತ ಕಂತು ಕಟ್ಟುವುದು ಹೇಗೆ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.