ADVERTISEMENT

ಖರೀದಿಯಲ್ಲಿ ಅಂತರ ಮರೆತ ಜನ

ಕೋವಿಡ್‌ ನಿಯಮ ಮೀರಿ ಅಗತ್ಯವಸ್ತು ಖರೀದಿ

​ಪ್ರಜಾವಾಣಿ ವಾರ್ತೆ
Published 14 ಮೇ 2021, 7:39 IST
Last Updated 14 ಮೇ 2021, 7:39 IST
ಕಮಲನಗರ ಪಟ್ಟಣದಲ್ಲಿ ಬೆಳಿಗ್ಗೆ ಕಿರಾಣಿ ಹಾಗೂ ಇನ್ನಿತರ ವಸ್ತುಗಳ ಖರೀದಿಗೆ ಗುಂಪಾಗಿ ನಿಂತಿದ್ದ ಜನ
ಕಮಲನಗರ ಪಟ್ಟಣದಲ್ಲಿ ಬೆಳಿಗ್ಗೆ ಕಿರಾಣಿ ಹಾಗೂ ಇನ್ನಿತರ ವಸ್ತುಗಳ ಖರೀದಿಗೆ ಗುಂಪಾಗಿ ನಿಂತಿದ್ದ ಜನ   

ಕಮಲನಗರ: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದರೂ ಜನ ಮಾತ್ರ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ. ಅಗತ್ಯ ವಸ್ತುಗಳ ಖರೀದಿಗೆ ಪ್ರತಿದಿನ ಸಮಯ ನಿಗದಿ ಮಾಡಿದ್ದರೂ ಜನ ಸುರಕ್ಷಿತ ಅಂತರ ಮರೆತು ಮುಗಿಬೀಳುತ್ತಿದ್ದಾರೆ.

ಸುರಕ್ಷಿತ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಿ ಎಂದರೂ ಜನ ಮಾತ್ರ ಅದಕ್ಕೆ ತಲೆಕೆಡಿಸಿಕೊಳ್ಳದೇ ಎಲ್ಲೆಂದರಲ್ಲಿ ಓಡಾಡುತ್ತಿರುವುದು ಕಂಡುಬರುತ್ತಿದೆ. ಇದು ಕೋವಿಡ್‌ ಹೆಚ್ಚಾಗಲು ಕಾರಣವಾಗುತ್ತಿದೆ.

ಗ್ರಾಮ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆ ಕರ್ಫ್ಯೂ ಕುರಿತು ಮಾಹಿತಿ ನೀಡುತ್ತಿದ್ದರೂ ಜನ ಚಿತ್ತ ಹರಿಸುತ್ತಿಲ್ಲ.

ADVERTISEMENT

ಸರ್ಕಾರ ಯಾವುದೇ ಕಾನೂನು ಜಾರಿಗೆ ತಂದರೂ ಸಾರ್ವಜನಿಕರು ಎಚ್ಚೆತ್ತುಕೊಳ್ಳದಿದ್ದರೆ ಕೊರೊನಾ ಸೋಂಕು ತಡೆಗಟ್ಟುವುದು ಕಷ್ಟ ಸಾಧ್ಯ ಎಂಬುದನ್ನು ಸಾರ್ವಜನಿಕರೇ ಮನವರಿಕೆ ಮಾಡಿಕೊಳ್ಳಬೇಕಾಗಿದೆ. ಇದೀಗ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನ ಈ ರೀತಿ ಓಡಾಡಿದರೆ ಏನು ಗತಿ ಎಂದು ಹಿರಿಯರು ಆತಂಕ ವ್ಯಕ್ತಪಡಿಸುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.