ADVERTISEMENT

ಬೆಳೆಗಳಲ್ಲಿ ಕೀಟ ನಿರ್ವಹಣೆ: ತರಬೇತಿ ಕಾರ್ಯಕ್ರಮ ನಾಳೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2021, 15:09 IST
Last Updated 5 ಆಗಸ್ಟ್ 2021, 15:09 IST

ಜನವಾಡ: ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರವು ಕೆ.ವಿ.ಕೆ ಕೃಷಿ ಪಾಠಶಾಲೆ ಸರಣಿ ಕಾರ್ಯಕ್ರಮದಲ್ಲಿ ಶನಿವಾರ (ಆ.7) ಬೆಳಿಗ್ಗೆ 11ಕ್ಕೆ ಮುಂಗಾರು ಬೆಳೆಗಳಲ್ಲಿ ಕೀಟಗಳ ಸಮಗ್ರ ನಿರ್ವಹಣೆ ಕುರಿತು ರೈತರಿಗೆ ಆನ್‍ಲೈನ್‍ನಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದೆ.

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಹಾಗೂ ಕಲಬುರ್ಗಿಯ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ರಾಜು ಜಿ. ತೆಗ್ಗೆಳ್ಳಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಬೆಳೆಗಳಲ್ಲಿ ಕೀಟಗಳ ಸಮಗ್ರ ನಿರ್ವಹಣೆ ಕುರಿತು ರೈತರಿಗೆ ಮಾಹಿತಿ ನೀಡಲಿದ್ದಾರೆ. ರೈತರ ಪ್ರಶ್ನೆಗಳಿಗೂ ಉತ್ತರಿಸಲಿದ್ದಾರೆ.

ರೈತರು ಗೂಗಲ್ ಮೀಟ್ ಲಿಂಕ್ meet.google.com/pnt-obto-rmt <https://meet.google.com/pnt-obto-rmt?hs=224> ಬಳಸಿ ತರಬೇತಿಯಲ್ಲಿ ಪಾಲ್ಗೊಳ್ಳಬಹುದು ಎಂದು ಕೃಷಿ ವಿಜ್ಞಾನ ಕೇಂದ್ರದ ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.